Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿ ಕೇಂದ್ರ ಆರಂಭ
(ರಾಜ್ಯ ) ಜಿಲ್ಲೆ

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿ ಕೇಂದ್ರ ಆರಂಭ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಕಿಮೊಥೆರಪಿ ಕೇಂದ್ರ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ-ಕೇರ್ ಕಿಮೊಥೆರಪಿಯನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡುರಾವ ಹೇಳಿದರು.
ಶನಿವಾರ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೊಥೆರಪಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿ, ಈಗಾಗಲೇ ವಿಜಯಪುರ ಹಾಗೂ ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿಗಳನ್ನು ಸ್ಥಾಪಿಸಲಾಗುತ್ತಿದೆ. ವಿಜಯಪುರದಲ್ಲಿ ಕಿಮೋಥೆರಪಿ ಕೇಂದ್ರದ ಸ್ಥಾಪನೆಯಿಂದ ವಿಜಯಪುರದಿಂದ ದೂರದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಇತ್ತು. ಆದರೆ, ದೂರದ ಪ್ರಯಾಣ ಬೆಳೆಸುವ ಬದಲಿಗೆ, ಕ್ಯಾನ್ಸರ್ ರೋಗಿಗಳು ಸ್ಥಳೀಯವಾಗಿಯೇ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಕೇಂದ್ರದಲ್ಲಿಯೇ ಎಲ್ಲ ಚಿಕಿತ್ಸೆ ಸೌಲಭ್ಯ ಒದಗಿಸುವುದರಿಂದ ಇದು ತುಂಬ ಅನುಕೂಲಕರವಾಗಲಿದೆ ಎಂದು ಹೇಳಿದರು.
ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ೧೦ ಹಾಸಿಗೆಯುಳ್ಳ ಕಿಮೋಥೆರಪಿ ಡೇ ಕೇರ ಕೇಂದ್ರ ತೆರೆಯುವ ಮೂಲಕ ಸರ್ಕಾರ ಅನುಕೂಲ ಕಲ್ಪಿಸಿದೆ. ಇದರೊಂದಿಗೆ ಮೆಮೊಗ್ರಾಫಿ ಕೇಂದ್ರವನ್ನು ಈ ಜಿಲ್ಲಾ ಆಸ್ಪತ್ರೆಯಲ್ಲಿ ಆರಂಭಗೊಂಡಿದ್ದು ಇದರಿಂದ ಸ್ತನ ಕ್ಯಾನ್ಸರ್ ಪ್ರಮಾಣವನ್ನು ಬಹಳಷ್ಟು ತಗ್ಗಿಸಬಹುದು. ಯಾವುದೇ ರೋಗವನ್ನು ಗುಣಪಡಿಸಲು ಪ್ರಾಥಮಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚಿದ್ದಲ್ಲಿ ರೋಗವನ್ನು ಗುಣಪಡಿಸಲು ಸಹಾಯಕವಾಗುತ್ತದೆ. ಪ್ರಾಥಮಿಕ ಹಂತದಲ್ಲಿಯೇ ಸ್ತನ ಕ್ಯಾನ್ಸರ್ ಪತ್ತೆ ಹಚ್ಚಿದ್ದಲ್ಲಿ ಗುಣಪಡಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿಯೇ ರೋಗವನ್ನು ಪತ್ತೆ ಹಚ್ಚಲು ಅವಶ್ಯಕವಿರುವ ಯಂತ್ರೋಪಕರಣಗಳನ್ನು ಸಹ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ. ಇದರಿಂದ ತಪಾಸಣೆಗೊಳಪಡಿಸಿ ರೋಗ ಪರೀಕ್ಷಿಸಲು ಅನುಕೂಲವಾಗಲಿದೆ. ಜಿಲ್ಲೆಯ ಸಾರ್ವಜನಿಕರು ನಗರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಕಿಮೋಥೆರಪಿ ಹಾಗೂ ಮೆಮೊಗ್ರಾಫಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ವಿಜಯಪುರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವೆಗಳ ನಿರ್ದೇಶಕಿ ಡಾ.ತ್ರಿವೇಣಿ ಎಂ.ಜಿ., ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಗುಣಾರಿ ಉಪಸ್ಥಿತರಿದ್ದರು.
ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಒದಗಿಸುವ ಸೌಲಭ್ಯ ಕುರಿತಾಗಿ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ನೀಡುತ್ತಿರುವ ಔಷಧೋಪಚಾರ ಕುರಿತು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾಹಿತಿ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು

ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ನೇಪಾಳದ ಪ್ರಾಕೃತಿಕ ದುರಂತದ ಸುತ್ತ..
    In ವಿಶೇಷ ಲೇಖನ
  • ವ್ಯವಸ್ಥೆ ತಪ್ಪು ಹುಡುಕದೇ ನಮ್ಮ ತಪ್ಪನ್ನು ಸರಿಪಡಿಸಿಕೊಳ್ಳೋಣ
    In ವಿಶೇಷ ಲೇಖನ
  • ಹನುಮನಿಗೂ ಕಾಡಿದ ಖಿನ್ನತೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.