ಸಿಂದಗಿ: ಈ ಬಾರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ರಾಜ್ಯದ ಜನತೆ ಆಯ್ಕೆ ಮಾಡುತ್ತಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಮಹಾಂತೇಶ ಹಟ್ಟಿ ಹೇಳಿದರು.
ಶನಿವಾರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ನೂರು ಬಾರಿ ಮೋದಿ ಬಂದರೂ ಕೂಡಾ ರಾಜ್ಯದ ಜನ ಬಿಜೆಪಿಯನ್ನು ಗೆಲ್ಲಲು ಬಿಡುವುದಿಲ್ಲ. ಬೆಲೆ ಏರಿಕೆಗೆ ಜನತೆ ಬೇಸತ್ತಿದ್ದಾರೆ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಜನ ಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಂದಗಿ ಕ್ಷೇತ್ರದಲ್ಲಿ ಎಂ.ಸಿ.ಮನಗೂಳಿಯವರ ನೀರಾವರಿ ಕಾಂತ್ರಿಯನ್ನು ಮೆಚ್ಚಿ ಈ ಬಾರಿ ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷವು ೩೦ ಸಾವಿರಕ್ಕೂ ಅಧಿಕ ಮತಗಳ ಅಂತರದ ಗೆಲುವನ್ನು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
ಈ ವೇಳೆ ಶ್ರೀಶೈಲ ಕವಲಗಿ, ಬಾಬಾಸಾಹೇಬ ಜಿಗಳಕರ, ನಿಂಗಣ್ಣ ಬುಳ್ಳಾ, ಸಂತೋಷ ಉಪ್ಪಿನ ಇದ್ದರು.
Related Posts
Add A Comment