Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು
(ರಾಜ್ಯ ) ಜಿಲ್ಲೆ

ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, `2015-16ನೇ ಸಾಲಿನ ಬಜೆಟ್ಟಿನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಅನುಷ್ಠಾನಕ್ಕೆ ಬರಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಡಲಾಗಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದಿದ್ದಾರೆ.
ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ 1.44 ಕೋಟಿ ರೂ. ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ, ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿದೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಗಿ ಅವರು ತಿಳಿಸಿದ್ದಾರೆ.
2 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ : ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿ ಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ತಲಾ 22 ಕೋಟಿ ರೂ.ಗಳಂತೆ ಒಟ್ಟು 44 ಕೋಟಿ ರೂ. ಒದಗಿಸಲು ಕೂಡ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ ಎಂದು ಪಾಟೀಲ ತಿಳಿಸಿದ್ದಾರೆ.
ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ಇಲ್ಲಿ ತಲಾ 250ರಂತೆ ಒಟ್ಟು 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗ ಇವು ಬಾಡಿಗೆ ಕಟ್ಟಡದಲ್ಲಿ ಇರುವುದರಿಂದ ಮೂಲಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿರುವ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕಾಗಿ ಒಟ್ಟು 1292.50 ಕೋಟಿ ರೂ. ಒದಗಿಸಲು ಸರಕಾರ ತೀರ್ಮಾನಿಸಿದೆ. ಇದರಲ್ಲಿ ಜಿಲ್ಲೆಯ ಈ ಎರಡು ಶಾಲೆಗಳೂ ಸೇರಿವೆ ಎಂದು ಅವರು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.