ನಾಗಠಾಣ: ಬಿಜೆಪಿ ಅಭ್ಯರ್ಥಿ ಗೆಲುವು ಸೂರ್ಯ-ಚಂದ್ರರಿರುವುದಷ್ಟೇ ಸತ್ಯ. ಆದರೆ ಕೆಲವರು ವಿನಾಕಾರಣ ಕ್ಷೇತ್ರದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿ ಚುನಾವಣಾ ಪ್ರಚಾರಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ಸಂಸದರಾದ ಶ್ರೀ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.
ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತೀಯ ಜನತಾ ಪಕ್ಷ ಸಾಮಾನ್ಯ ಕಾರ್ಯಕರ್ತನಿಗೆ ಮಣೆ ಹಾಕಿದೆ, ಬಿಜೆಪಿ ಅಭ್ಯರ್ಥಿಯಾಗಿರುವ ಸಂಜೀವ ಐಹೊಳ್ಳಿ ಬಿಜೆಪಿ ಅಭ್ಯರ್ಥಿಯಾಗಿದ್ದು ಇವರು ಒಬ್ಬ ಸಾಮಾನ್ಯ ಬಡ ಕುಟುಂಬದಿAದ ಬಂದ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಸದಸ್ಯರಾಗಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ, ಇಂತಹ ಬೇರುಮಟ್ಟದ ಕಾರ್ಯಕರ್ತನನ್ನು ಗುರುತಿಸಿ ಬಿಜೆಪಿ ಚುನಾವಣೆಗೆ ನಿಲ್ಲಿಸಿದೆ. ಆದರೆ ಐಹೋಳೆಯವರ ಸರಳತೆ, ಪಕ್ಷನಿಷ್ಠೆ ಗುರುತಿಸಿ ನಾಗಠಾಣ ಮತಕ್ಷೇತ್ರದ ಎಲ್ಲ ವರ್ಗದ ಮತದಾರ ಬಾಂಧವರು ಅವರನ್ನು ಬೆಂಬಲಿಸಿ ಅಭೂತಪೂರ್ವ ಜಯಕ್ಕೆ ಪಣ ತೊಟ್ಟಿದ್ದಾರೆ. ಆದರೆ ಕೆಲವೊಂದು ಅತೃಪ್ತ ಆತ್ಮಗಳಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿದೆ, ಇಂತಹ ಕೆಲವೊಂದು ಮುಖಂಡರು ಕ್ಷೇತ್ರದಲ್ಲಿ ಸುಳ್ಳು ಸುದ್ದಿ ಹರಡಿಸುವುದು, ಚುನಾವಣೆ ಪ್ರಚಾರಕ್ಕೆ ತೊಂದರೆ ಕೊಡುವುದು, ಸಾಮಾನ್ಯ ಕಾರ್ಯಕರ್ತರಿಗೆ ಬೆದರಿಸುವುದು ಕಂಡು ಬಂದಿದೆ ಎಂದು ಜಿಗಜಿಣಗಿ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷದ ಅಭಿಮಾನಿ ಕಾರ್ಯಕರ್ತರು ಮತ್ತು ಕ್ಷೇತ್ರದ ಮತದಾರ ಬಾಂಧವರು ಹಗಲಿರುಳು ದುಡಿದು ಐಹೊಳೆಯವರನ್ನು ಹೆಚ್ಚಿನ ಮತಗಳ ಅಂತರದಿAದ ಗೆಲ್ಲಿಸಿ ವಿಜಯಪುರ ಜಿಲ್ಲೆಯಲ್ಲಿ ಇತಿಹಾಸ ನಿರ್ಮಿಸುವುದಂತೂ ಸತ್ಯ ಎಂದು ರಮೇಶ ಜಿಗಜಿಣಗಿ ಭವಿಷ್ಯ ನುಡಿದಿದ್ದಾರೆ.
ನಾಗಠಾಣ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರಕ್ಕೆ ತೊಂದರೆ ಸಲ್ಲದು :ಜಿಗಜಿಣಗಿ
Related Posts
Add A Comment