ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಆರ್ಥಿಕ ವರ್ಷ ೨೦೨೫-೨೬ ರಿಂದ ಆರ್ಥಿಕ ವರ್ಷ ೨೦೨೭-೨೮ ರ ಅವಧಿಯ ವಿದ್ಯುತ್ ದರ ಪರಿಷ್ಕರಣೆ ಕುರಿತು ಸಾರ್ವಜನಿಕ ವಿಚಾರಣಾ ಸಭೆಯನ್ನು ಫೆಬ್ರವರಿ ೨೭ ರಂದು ಬೆಳಿಗ್ಗೆ ೧೦.೩೦ ಕ್ಕೆ ನವನಗರದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ನಿಗಮ ಕಛೇರಿಯ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೆಸ್ಕಾಂನ ಅಧಿಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
