ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಯ್ಯ-ವ್ಯಯ ಅಂದಾಜು ಪತ್ರಿಕೆ ತಯಾರಿಸಲು ಸಾರ್ವಜನಿಕರಿಂದ ಸಲಹೆ-ಸೂಚನೆ ಪಡೆದುಕೊಳ್ಳಲು ಫೆ.೨೮ರಂದು ಮಧ್ಯಾಹ್ನ ೪ ಗಂಟೆಗೆ ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ೨ನೇ ಸುತ್ತಿನ ಆಯ್ಯ-ವ್ಯಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕೆ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ-ಸೂಚನೆಗಳನ್ನು ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
