ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇದೇ ಮಾ.೧ರಿಮದ ೨೦ರವರೆಗೆ ಜಿಲ್ಲೆಯ ೬೩ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆಗಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ನಿಷೇಧಿಸಿ ಆದೇಶಿಸಲಾಗಿದೆ.

