Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ವಿಜ್ಞಾನ ವಸ್ತು ಪ್ರದರ್ಶನ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ವಿಜ್ಞಾನ ವಸ್ತು ಪ್ರದರ್ಶನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮತ್ತು ಸೃಜನಶೀಲತೆ ಹೆಚ್ಚಿಸುತ್ತದೆ ಎಂದು ಶಿಕ್ಷಣ ಸಂಯೋಜಕ ಬಿ.ಬಿ.ಪಾಟೀಲ ಎಂದು ಹೇಳಿದರು.
ಸಿಂದಗಿ ಪಟ್ಟಣದ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ವಿದ್ಯಾನಿಕೇತನ ಪ್ರಾಥಮಿಕ ಶಾಲೆ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಆಹಾರ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ರಿಬ್ಬನ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ ಮೇಳಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವುದಲ್ಲದೆ ಸೃಜನಶೀಲತೆ ಹೆಚ್ಚಿಸುತ್ತದೆ ಮತ್ತು ಸರ್ ಸಿ.ವಿ ರಾಮನ್ ಅವರು ಬೆಳಕಿನ ವಕ್ರೀಭವನದ ಕ್ರಿಯೆಯಲ್ಲಿ ನಡೆಸಿದ ಸಂಶೋಧನೆಯ ಫಲವಾಗಿ ನೋಬೆಲ್ ಪ್ರಶಸ್ತಿಗೆ ಭಾಜನರಾದರು. ಆ ಸವಿನೆನಪಿಗಾಗಿ ನಾವು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತೇವೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವಲ್ಲಿ ವಿಜ್ಞಾನ ಪ್ರದರ್ಶನ ಸಹಕಾರಿಯಾಗಿದೆ ಎಂದರು.
ಈ ವೇಳೆ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ ಮಾತನಾಡಿ, ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳಗಳು ಒಟ್ಟಿಗೆ ಆಚರಿಸುತ್ತಿರುವುದು ವಿಶೇಷವಾಗಿದೆ. ಮಕ್ಕಳು ಜಂಕ್ ಫುಡ್ ಗಳಿಂದ ದೂರವಿದ್ದು, ದೇಶಿ ಆಹಾರಗಳ ಸೇವನೆಯಿಂದ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಆಹಾರ ಮೇಳದಲ್ಲಿ ಮಕ್ಕಳು ಕರದಂಟು, ಶೇಂಗಾ ಲಾಡು, ಬೇಸನ ಲಾಡು, ರವೇ ಲಾಡು, ಮಜ್ಜಿಗೆ, ವಿವಿಧ ತರಹ ಶಂಕರಪಾಳ್ಯ, ಚಕ್ಕಲಿಯಂತಹ ದೇಶಿ ತಿಂಡಿಗಳ ಪ್ರದರ್ಶನ ಮಾಡಲಾಯಿತು.
ವಿಜ್ಞಾನ ಮೇಳದಲ್ಲಿ ಕಸ ವಿಲೇವಾರಿ ತ್ಯಾಜ್ಯ ನಿರ್ವಹಣೆ, ಚಂದ್ರಯಾನ, ಸೌರವ್ಯೂಹ ಮಾದರಿ, ಅರಣ್ಯ ಸಂರಕ್ಷಣೆ ಮಾದರಿಗಳು, ರಾಕೆಟ್ ಉಡಾವಣೆ, ಎಟಿಎಂ ಮಷೀನ್ ಮಾದರಿಗಳು, ಭೂಕಂಪನ ಅಲಾರಾಂ, ಆಹಾರ ಸರಪಳಿ, ಮಳೆ ನೀರಿನ ಸಂಗ್ರಹ, ಮೂತ್ರ ಜನಕಾಂಗ ಮಾದರಿಗಳು, ಗಾಳಿ ಶಕ್ತಿ ಯಂತ್ರಗಳು, ಹಗಲು ರಾತ್ರಿಗಳ ಸಂಯೋಜನೆ ಚಟುವಟಿಕೆ, ಡ್ರೋನ್ ಕ್ಯಾಮೆರಾದಂತಹ ಮಾದರಿಗಳು ವಿಜ್ಞಾನ ಮೇಳದಲ್ಲಿ ಪ್ರದರ್ಶಿಸಲಾಯಿತು. ಮತ್ತು ಗಣಿತ ವಿಭಾಗದಿಂದ ಆಕೃತಿಗಳ ಪರಿಕಲ್ಪನೆ ತಂತ್ರಜ್ಞಾನದಿಂದ ಸಂಖ್ಯೆಗಳನ್ನು ಪರಿಚಯಿಸುವುದು, ಗಣಿತ ವಿಸ್ಮಯಗಳ ಮತ್ತು ಭಾಷಾ ಸಂಘಗಳಿಂದ ಅನುಭವ ಮಂಟಪ, ಚಿತ್ರಗಳಿಂದ ಕಥೆ ವಿವರಿಸುವುದು, ಅಕ್ಷರ ವರ್ಣಮಾಲೆಗಳು, ವಚನ ಪ್ರಕಾರಗಳು ಮನಸೂರೆಗೊಂಡವು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ. ಕುಲಕರ್ಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಪಿ.ಡಿ.ಕುಲಕರ್ಣಿ,ಹೋಟೆಲ್ ಉದ್ಯಮಿ ರವೀಂದ್ರ ಶೆಟ್ಟಿ, ಮುಖ್ಯಗುರುಮಾತೆ ಎಸ್.ಆಯ್.ಅಸ್ಕಿ, ವಿದ್ಯಾನಿಕೇತನ ಮತ್ತು ಪ್ರೇರಣಾ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಎಮ್.ಪಿ.ಬುಕ್ಕಾ ಇದ್ದರು.
ಸಾನ್ವಿ ಬಾಗಲಕೋಟ ಹಾಗೂ ಸಂಘಡಿಗರು ಪ್ರಾರ್ಥಿಸಿದರು. ಶಿಕ್ಷಕ ಸತೀಶ ಕುಲಕರ್ಣಿ ಸ್ವಾಗತಿಸಿದರು. ವಿ.ಎ.ನಾಯಕ ನಿರೂಪಿಸಿದರು. ಪ್ರದರ್ಶನದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.