ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಫೆಬ್ರವರಿ ೨೮ರ ಬೆಳಿಗ್ಗೆ ೧೦:೩೦ಕ್ಕೆ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ ಅವರ ಬದುಕು ಮತ್ತು ಸಾಧನೆಗಳ ಪರಿಚಯದ ಕುರಿತ ಓದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಿ.ಎಸ್.ಬೆಳಗಲಿ ಅವರು ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬಸವರಾಜ ಗಂಗನಹಳ್ಳಿ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ.ನಾಟಿಕಾರ, ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ತಿರುಮಲ ಕುಲಕರ್ಣಿ, ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಕಾಂತ ಕೆ.ಎಸ್ ಅವರು ಭಾಗವಹಿಸುವರು. ಮಾಧವ ಗುಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶೃತಿ ಮೇಲಿನಮನಿ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
