ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಿನಾಂಕ ೦೧-೦೩-೨೦೨೫ ರಿಂದ ೨೦-೦೩-೨೦೨೫ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕೆ ಪರೀಕ್ಷೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುವುದರಿಂದ ನಿರಂತರ ವಿದ್ಯುತ್ ಪೂರೈಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ ಎಂದು ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಸೂಚನೆಯಂತೆ ನಿರಂತರ ವಿದ್ಯುತ್ ಪೂರೈಸುವತ್ತ ಅಗತ್ಯ ಕ್ರಮವಹಿಸುವಂತೆ ಅವರು ತಿಳಿಸಿದ್ದಾರೆ.

