Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಬಹು ಸಂಸ್ಕೃತಿಗಳ ತವರೂರು :ಡಾ.ಅರವಿಂದ ಮನಗೂಳಿ
(ರಾಜ್ಯ ) ಜಿಲ್ಲೆ

ಸಿಂದಗಿ ಬಹು ಸಂಸ್ಕೃತಿಗಳ ತವರೂರು :ಡಾ.ಅರವಿಂದ ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಾಚೀನ ಕಾಲದಿಂದಲೂ ಸಿಂದಗಿಗೆ ತನ್ನದೇ ಆದ ಚಾರಿತ್ರಿಕ ಹಿನ್ನಲೆ ಇದೆ. ಸಿಂದಗಿ ಬಹು ಸಂಸ್ಕೃತಿಗಳ ತವರೂರು ಎಂದು ಸಿ.ಎಮ್.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.
ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ಥಳಿಯ ಅವ್ವಾ ಫೌಂಡೇಶನ್ ಸಿಂದಗಿ ಹಾಗೂ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಘಟಕದ ಸಹಯೋಗದಲ್ಲಿ ನಡೆದ ೧೮೨೪ರ ಸಿಂದಗಿ ಬಂಡಾಯದ ೨೦೦ನೇ ವರ್ಷಾಚರಣೆ ಸವಿನೆನಪಿಗಾಗಿ ಸಿಂದಗಿ ಚಾರಿತ್ರಿಕ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಿಂದಗಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನಿರ್ಮಾಣಗೊಂಡ ಐತಿಹಾಸಿಕ ದೇವಾಲಯಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಅದರ ಸಾಧಕ ಬಾಧಕಗಳ ಕುರಿತಾಗಿ ಚರ್ಚಿಸಿ ನಶಿಸಿ ಹೋಗುತ್ತಿರುವ ದೇವಾಲಯಗಳ ಸಂರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಬೇಕು ಎಂದರು.
ಈ ವೇಳೆ ಹುನ್ನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ನಿಂಗರಾಜ ಅಸ್ಕಿ ಮಾತನಾಡಿ, ಸಿಂದಗಿ ಸಮ್ಮಿಶ್ರ ಸಂಸ್ಕೃತಿಯ ತವರು ನೆಲೆ. ಮೌರ್ಯರ ಕಾಲದಿಂದ ಯಾದವರ ಕಾಲದವರೆಗೂ ಸಿಂದಗಿಯನ್ನು ವಿವಿಧ ರಾಜಮನೆತನಗಳು ಆಳಿವೆ ಆದರೆ ರಾಷ್ಟ್ರಕೂಟರ ಕಾಲದ ಕ್ರಿ.ಶ. ೮೬೨ರ ಹೂವಿನ ಹಿಪ್ಪರಗಿ ಶಾಸನ ವಿಜಯಪುರ ಜಿಲ್ಲೆಯ ಪ್ರಥಮ ಐತಿಹಾಸಿಕ ದಾಖಲೆ ಆಧಾರವಾಗಿದೆ.
ಸಿಂದಗಿ ತಾಲೂಕಿನ ಒಟ್ಟು ೧೦೮ ಶಾಸನಗಳಲ್ಲಿ ೫೧ ಶೈವ ಧರ್ಮಕ್ಕೆ ಸಂಬಂಧಪಟ್ಟ ಶಾಸನಗಳಿವೆ. ಸಿಂದಗಿ ನಗರದಲ್ಲಿ ಕೇವಲ ಮೂರು ಶಾಸನಗಳು ಸಿಕ್ಕಿದ್ದು ಈ ಭಾಗದ ಇತಿಹಾಸ. ಪ್ರಾಚೀನ ತರ್ದವಾಡಿ ಸಾವಿರ ಹಾಗೂ ಸಗರನಾಡಿನ ಮಧ್ಯೆ ಇರುವ ಈ ಭಾಗ ಸಿಂದಗಿ ೧೨ ಒಂದು ಆಡಳಿತದ ಭಾಗವಾಗಿತ್ತು. ಈ ಪ್ರದೇಶವನ್ನು ಪ್ರಾಚೀನ ರಾಜಮನೆತನಗಳು, ಬಹುಮನಿ ಸುಲ್ತಾನರು, ವಿಜಯಪುರದ ಆದಿಲ್‌ಶಾಹಿಗಳು, ಮರಾಠ ಪೇಶ್ವೆಗಳು, ಹೈದರಾಬಾದ್ ನಿಜಾಮರು ಹಾಗೂ ಬ್ರಿಟಿಷರು ಆಳಿರುವುದರಿಂದ ಎಲ್ಲಾ ವರ್ಗದ ಸಂಸ್ಕೃತಿಯ ಪ್ರಭಾವ ಈ ನೆಲದ ಮೇಲಾಗಿದೆ ಎಂದರು.
ಈ ಸಂಧರ್ಭದಲ್ಲಿ ಎಚ್.ಜಿ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ನುಡಿಗಳನ್ನಾಡಿ, ಗ್ರಾಮಚರಿತ್ರೆಯ ಅವಲೋಕನ ಮಾಡುವುದರ ಮೂಲಕ ವಿದ್ಯಾರ್ಥಿಗಳು ಐತಿಹಾಸಿಕ ಪ್ರಜ್ಞೆ ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಇತಿಹಾಸದ ಅವಲೋಕನ ಮಾಡಿಕೊಡುವಲ್ಲಿ ಅವ್ವಾ ಫೌಂಡೇಶನ್ ಈ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯೆ ಜೆ.ಸಿ.ನಂದಿಕೋಲ, ಶಿಕ್ಷಕ ಸಿದ್ದಲಿಂಗ ಚೌಧರಿ ಮಾತನಾಡಿದರು.
ಸ್ಥಳೀಯ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮಾಡುವದರಿಂದ ನಮ್ಮ ಸಂಸ್ಕೃತಿ ಉಳಿಯುತ್ತದೆ. ಇಂತಹ ಕಾರ್ಯಕ್ರಮಗಳು ಮೇಲಿಂದ ಮೇಲೆ ನಡೆಯಬೇಕು ಎಂದು ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ರವಿ ಗೋಲಾ, ಡಾ.ಶರಣಬಸವ ಜೋಗೂರ, ದಾನಯ್ಯ ಮಠಪತಿ, ಸುಧಾಕರ ಚವ್ಹಾಣ, ಪಿ.ಸಿ.ಕುಲಕರ್ಣಿ, ಚನ್ನು ಕತ್ತಿ, ಕುಮಾರ ಕತ್ತಿ, ನಾಜೀಯಾ ಮುಲ್ಲಾ ಸೇರಿದಂತೆ ಇತರರು ಇದ್ದರು. ಅವ್ವಾ ಫೌಂಡೇಶನ್ ಸಂಚಾಲಕ ಸಿದ್ದಲಿಂಗ ಕಿಣಗಿ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.