ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ದೇಶದ ಅಭಿವೃದ್ಧಿಗೆ ವಿಜ್ಞಾನದ ಕೊಡುಗೆ ಅಪಾರ, ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಮಾಹಿತಿ ತಂತ್ರಜ್ಞಾನದ ಜೊತೆ ಜೊತೆಗೆ ವೈಜ್ಞಾನಿಕತೆ ಮೈಗೂಡಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ ಹೇಳಿದರು.
ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಜ್ಞಾನವು ಹೊಸ ಹೊಸ ಆವಿಷ್ಕಾರಗಳು ಮೂಲಕ ಮಕ್ಕಳಲ್ಲಿ ಜ್ಞಾನದಾಹವನ್ನು ಹೆಚ್ಚಿಸುತ್ತದೆ. ಇಡೀ ವಿಶ್ವವೇ ಭಾರತದೆಡೆಗೆ ತಿರುಗಿ ನೋಡುವಂತೆ ಮಾಡಿದ್ದು, ಖ್ಯಾತ ವಿಜ್ಞಾನಿ ಸಿ ವಿ ರಾಮನ್. ಅವರು ಕಂಡುಹಿಡಿದ ಬೆಳಕಿನ ಚದುರವಿಕೆಯ ಆವಿಷ್ಕಾರ ಅವರಿಗೆ ಜಾಗತಿಕ ಮಟ್ಟದಲ್ಲಿ ಪ್ರಶಸ್ತಿಯನ್ನು ತಂದುಕೊಟ್ಟಿದೆ. ಪ್ರತಿ ವರ್ಷ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತಿದೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ ಮಲ್ಲಿಕಾರ್ಜುನ ಮರಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ವೇಳೆ ಉಪನ್ಯಾಸಕಿರಾದ ನಸ್ರೀನ್ ತಾಜ್, ಸುಮಾ ಎಚ್ಚ್, ಪಾರ್ವತಿ, ಜ್ಯೋತಿ, ಉಪನ್ಯಾಸಕರಾದ ಶಶಿಕುಮಾರ, ಡಾ ಶರಣಪ್ಪ, ಡಾ ವೈ ಎಸ್ ಪಾಟೀಲ, ಬೋಧಕೇತರ ಸಿಬ್ಬಂದಿ ಸಂಗಮೇಶ ಪಟ್ಟಣಕರ್ ಮಾಸುಮ ಅಲಿ ನಾಶಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

