ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ಪತ್ರಿವಮನ ಮಠದಲ್ಲಿ ಮಾ.೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಮಾಡಲು ಹೋರಾಟದ ರೂಪರೇಷೆ ತಯಾರಿಸುವ ಹಿನ್ನೆಲೆಯಲ್ಲಿ ರೈತ ಬಾಂಧವರ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಪೂರ್ವಭಾವಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತ ಬಾಂಧವರು ಆಗಮಿಸಿ ಮುಂದಿನ ಹೋರಾಟದ ಕುರಿತು ತಮ್ಮ ಸಲಹೆ-ಸೂಚನೆ ನೀಡಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
