ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಶಿವಲಿಂಗೇಶ್ವರ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಶಿವಾನುಭವ ಸವಿನೆನಪು, ಲಿಂ.ಶಾಂತಾಬಾಯಿ ಮೇಟಿ, ಲಿಂ. ವಿರುಪಾಕ್ಷಪ್ಪ ಆಲಗೂರ, ಲಿಂ.ಷಣ್ಮುಖಪ್ಪ ಶೀಲವಂತ ಸ್ಮರಣಾರ್ಥ ಮಾ. ೧ ರಂದು ಸಂಜೆ ೬ ಗಂಟೆಗೆ ದತ್ತಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ ವಹಿಸುವರು. ಮುದ್ದೇಬಿಹಾಳ ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ನಾಲತವಾಡ ಕಾರ್ಯಕ್ರಮ ಉದ್ಘಾಟಿಸುವರು. ಸಾಂಸ್ಕ್ರತಿಕ ನಾಯಕ ಬಸವಣ್ಣನವರು ಕುರಿತು ಯಾಳವಾರದ ಬಸಯ್ಯ ಹಿರೇಮಠ ಅನುಭಾವ ನೀಡುವರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ನಾಗರಾಳ, ಗಿರಿಜಾ ಪಾಟೀಲ ಆಗಮಿಸುವರು.
ಇದೇ ಸಂದರ್ಭದಲ್ಲಿ ಡಾ.ಭೀಮಾಶಂಕರ ಹಡಪದ, ರೋಹಿಣಿ ಕಂಬಾಳೆ, ತೇಜಶ್ವಿನಿ ಖೇಡದ ಅವರನ್ನು ಸನ್ಮಾನಿಸಲಾಗುವುದು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಆರ್.ಜಿ.ಅಳ್ಳಗಿ ತಿಳಿಸಿದ್ದಾರೆ.
