ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾರ್ಚ್ ೦೪ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಾರ್ಚ್ ೦೪ರ ಬೆಳಿಗ್ಗೆ ೯ ಗಂಟೆಗೆ ಕಲಬುರಗಿಯಿಂದ ಹೊರಟು, ಬೆಳಿಗ್ಗೆ ೧೧ಕ್ಕೆ ಸಿಂದಗಿಗೆ ಆಗಮಿಸಿ,ಸಿಂದಗಿ ಸಿಐಆರ್‌ಡಿ ಸಂಸ್ಥೆ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ-೨೦೨೫ರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ೧೨.೩೦ಕ್ಕೆ ಸಿಂದಗಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರೊಂದಿಗೆ ಹಾಗೂ ಮಹಿಳಾ ಬೋಧಕರೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ ೧;೩೦ಕ್ಕೆ ಸಿಂದಗಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡುವ ಅವರು, ಮಧ್ಯಾಹ್ನ ೩ಕ್ಕೆ ಸಿಂದಗಿಯಿಂದ ಶಹಪೂರ ತಾಲೂಕಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
