ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ರಿಸನಂ.೮೩ರ ೧೦ ಎಕರೆ ೦೨ ಗುಂಟೆ ಜಮೀನಿನ ಪೈಕಿ ೫ ಎಕರೆ ಜಮೀನನ್ನು ಹೊಸದಾಗಿ ೧೧೦ ಕೆವಿ ವಿದ್ಯುತ್ ಉಪ ಕೇಂದ್ರ ಸ್ಥಾಪನೆ ಹಾಗೂ ವಸತಿ ಗೃಹ ನಿರ್ಮಾಣಕ್ಕಾಗಿ ಜಮೀನು ಮಂಜೂರಿಸಲು ಉದ್ಧೇಶಿಸಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ, ಈ ಅಧಿಸೂಚನೆ ಹೊರಡಿಸಿದ ಮೂವತ್ತು ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
