Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಲಸಂಪನ್ಮೂಲ ಸಚಿವ ಹಾಗೂ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಜಲಸಂಪನ್ಮೂಲ ಸಚಿವ ಹಾಗೂ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತೆಲಂಗಾಣಕ್ಕೆ ಆಲಮಟ್ಟಿ ಜಲಾಶಯದಿಂದ ೧.೨೭ ಟಿ.ಎಂ.ಸಿ. ನೀರನ್ನು ಹರಿಬಿಟ್ಟ ರಾಜ್ಯ ಸರ್ಕಾರದ ನಡೆಗೆ ರೈತ ಸಂಘ ಖಂಡನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಜುರಾಲಾ ಆಣೆಕಟ್ಟಿಗೆ ಆಲಮಟ್ಟಿ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯದಿಂದ ೧.೨೭ ಟಿ.ಎಂ.ಸಿ. ನೀರನ್ನು ಹರಿಬಿಟ್ಟು ಅವಳಿ ಜಿಲ್ಲೆಯ ರೈತರ ಬದುಕನ್ನು ಹಾಳು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಶಂಖ ವಾದ್ಯ ಮೊಳಗಿಸಿದರು.
ಶುಕ್ರವಾರದಂದು ವಿಜಯಪುರ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ರೈತ ವಿರೋಧಿ ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವರ ವಿರುದ್ಧ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗುತ್ತ ಅವರ ಪ್ರತಿಕೃತಿಗಳನ್ನು ದಹಿಸಿ ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದರು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಅವಳಿ ಜಿಲ್ಲೆಯ ರೈತರ ಬದುಕನ್ನು ಕಿತ್ತುಕೊಂಡು ತೆಲಂಗಾಣ ರಾಜ್ಯಕ್ಕೆ ನೀರು ಹರಿಸಿ ತೆಲಂಗಾಣ ರಾಜ್ಯದ ರೈತರಿಗೆ ಹಾಗೂ ಜನಸಾಮಾನ್ಯರಿಂದ ಶಬ್ಬಾಶಗಿರಿ ಪಡೆದುಕೊಳ್ಳಲು ನೀರು ಹರಿಬಿಟ್ಟಿದ್ದಾರೆ. ಇದನ್ನು ಖಂಡಿಸಿ ಪ್ರತಿಕೃತಿ ದಹಿಸಿದ ನಂತರ ನಮ್ಮ ರೈತರ ಪಾಲಿಕೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಇಂದಿನಿಂದ ನಮ್ಮ ಪಾಲಿಗೆ ಸತ್ತು ಹೋಗಿದ್ದಾರೆ ಎಂದು ಆಕ್ರೋಶಭರಿತರಾಗಿ ಹೋಳಿ ಹಬ್ಬ ಇನ್ನು ಮುಂದೆ ಇರುವಾಗಲೇ ಈಗಲೇ ನಮಗೆ ಶಂಖವಾದ್ಯ ಮೊಳಗಿಸಲು ಸರ್ಕಾರ ಎಡೆಮಾಡಿಕೊಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಂಖವಾದ್ಯ ಮೊಳಗಿಸಿದರು.
ನಮಗೆ ಕುಡಿಯಲು ನೀರಿಲ್ಲ. ಈ ಸದ್ಯ ಆಲಮಟ್ಟಿ ಆಣೆಕಟ್ಟಿನಲ್ಲಿ ಕೇವಲ ೩೩ ಟಿಎಂಸಿ ಮಾತ್ರ ನೀರು ಉಳಿದಿವೆ. ಇದರಲ್ಲಿ ಕೈಗಾರಿಕೆ ಉದ್ದೇಶಕ್ಕೆ ಜಲಚರ, ಜನ ಹಾಗೂ ಜಾನುವಾರುಗಳಿಗೆ ಹಾಗೂ ಜಿಲ್ಲೆಯ ರೈತರುಗಳಿಗೆ ನೀರು ಮೀಸಲಿರಿಸಬೇಕು. ತೆಲಂಗಾಣ ಸರ್ಕಾರವನ್ನು ಮೆಚ್ಚಿಸಲು ಒಂದೇ ಪಕ್ಷದ ಮುಖಾ ನೋಡಿ ನೀರು ಹರಿಸಿ ನಮ್ಮ ಜಿಲ್ಲೆಯ ರೈತರಿಗೆ ಘೋರಿ ತೋಡಲು ಹೊರಟಿದೆ. ಈ ಹಿಂದೆ ನ್ಯಾಯಮೂರ್ತಿ ಬ್ರಿಜೆಶ್ ಕುಮಾರ ನೇತೃತ್ವದ ನ್ಯಾಯಾಧೀಕರಣ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ೫೨೪.೨೫೬ ಕ್ಕೆ ನೀರು ನಿಲ್ಲಿಸಲು ಅನುಮತಿ ಕೊಟ್ಟಾಗ ಸುಮ್ಮನಿರದ ತೆಲಂಗಾಣ ಸರ್ಕಾರ ಟ್ರಿಬ್ಯೂನಲ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಆಣೆಕಟ್ಟಿನ ನೀರಿನ ಮಟ್ಟ ಎತ್ತರಿಸಲು ತಡೆಯಾಜ್ಞೆ ತಂದು ನಮ್ಮ ರೈತರನ್ನು ಹಾಳುಮಾಡಿದೆ. ಈಗ ಅವರಿಗೆ ಆಲಮಟ್ಟಿ ನೀರಿನ ನೆನಪಾಗಿದೆ ಎಂದರು.
ನಂತರ ಪ್ರತಿಕೃತಿ ದಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಲ್ಲಿ ಕೂಡ ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಬಸವನ ಬಾಗೇವಾಡಿ ತಾಲೂಕಾ ಅಧ್ಯಕ್ಷ ಉಮೇಶ ವಾಲೀಕಾರ, ವಿಠ್ಠಲ ಬಿರಾದಾರ, ರಾಜೇಸಾಬ ವಾಲಿಕಾರ, ಗುರಲಿಂಗಪ್ಪ ಪಡಸಲಗಿ, ದಾವಲಸಾಬ ನದಾಫ, ಚನಬಸಪ್ಪ ಸಿಂಧೂರ, ಗಿರಮಲ್ಲಪ್ಪ ದೊಡಮನಿ, ಹಣಮಂತರಾಯ ಕಲಬುರ್ಕಿ, ಬಸವರಾಜ ಮಾಡ್ಯಾಳ, ಲಾಲಸಾಬ ಹಳ್ಳೂರ, ಶಿವಶರಣ ನಾಗರೆಡ್ಡಿ, ಆನಂದ ನಾಗರೆಡ್ಡಿ, ಸಾಹೇಬಗೌಡ ಹೊಸೂರ, ಮುದಕಪ್ಪಗೌಡ ಸರೂರ, ಪರಶುರಾಮ ಹೊಸೂರ, ಹಣಮಂತ ವಾಲೀಕಾರ, ಬಸವರಾಜ ನಾಗರೆಡ್ಡಿ, ಯಮನೂರಪ್ಪ ಮಾದರ, ಮಾರುತಿ ಹೂಗಾರ, ಸೋಮೇಶ ನಾಗರೆಡ್ಡಿ, ಹಣಮಂತರಾಯ ಹೂಗಾರ, ಶೇಖಪ್ಪ ಮಾದರ, ಶರಣು ವಾಲಿಕಾರ, ಕಿರಣ ನಾಟೀಕಾರ, ಗುರಲಿಂಗಯ್ಯ ತೆಗ್ಗಿನಮಠ, ಕಾಸೀನಾಥ ಬಿರಾದಾರ, ಮಡಿವಾಳಪ್ಪ ನಾಗರೆಡ್ಡಿ, ಪರಸು ಹೊಸೂರ, ಮಲಿಗೆಪ್ಪ ಸಾಸನೂರ, ಮಂಜುನಾಥ ಸಜ್ಜನ, ಶ್ರೀಶೈಲ ಹೊಸೂರ, ಶಿವು ನಾಗರೆಡ್ಡಿ, ಮಾರುತಿ ಹೂಗಾರ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.