Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದಿಂದ ತಳ ಸಮುದಾಯಕ್ಕೆ ಅನ್ಯಾಯ :ಬಿಜೆಪಿ ಆರೋಪ
(ರಾಜ್ಯ ) ಜಿಲ್ಲೆ

ಸರ್ಕಾರದಿಂದ ತಳ ಸಮುದಾಯಕ್ಕೆ ಅನ್ಯಾಯ :ಬಿಜೆಪಿ ಆರೋಪ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ಯಾರಂಟಿಗೆ ಎಸ್‌ಸಿಪಿ/ಟಿಎಸ್‌ಪಿ ಹಣ ಬಳಕೆ | ಎಸ್‌ಸಿ/ಎಸ್‌ಟಿಗಳಿಗೆ ಮೀಸಲಿಟ್ಟ ರೂ.25,000 ಕೋಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಮೈಸೂರು: ಎಸ್‌ಸಿಪಿ/ಟಿಎಸ್‌ಪಿ ಉಪಯೋಜನೆಯಡಿ ಎಸ್‌ಸಿ/ಎಸ್‌ಟಿಗಳಿಗೆ ಮೀಸಲಿಟ್ಟ 25,000 ಕೋಟಿ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದು, ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
ಮೈಸೂರಿನ ಬಿಡೆಪಿ ಕಚೇರಿಯಲ್ಲಿ ಗುರುವಾರ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು, ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಶೇ.24 ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದರು.
ನಮ್ಮ ಪಕ್ಷ ಗ್ಯಾರಂಟಿ ಯೋಜನೆಗಳ ವಿರುದ್ಧವಿಲ್ಲ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಅಗತ್ಯವಿರುವ 56,000 ಕೋಟಿಗಳಷ್ಟು ಹಣವನ್ನು ಪ್ರತ್ಯೇಕ ಮೀಸಲಿಡಬೇಕು ಮತ್ತು ಎಸ್‌ಸಿ/ಎಸ್‌ಟಿ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಶೇ 24.8 ರಷ್ಟು ಹಣವನ್ನು ಬಳಸಬಾರದು ಎಂದು ಹೇಳಿದರು.
ರಾಜ್ಯ ಸರ್ಕಾರದ ಜನ ವಿರೋಧಿ ನಿಲುವಿನ ವಿರುದ್ಧ ಬೃಹತ್ ಜನಾಂದೋಲನ ನಡೆಸಲಾಗುತ್ತಿದೆ. ಬಜೆಟ್ ಮಂಡನೆ ವೇಳೆ ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ ಹಣ ಮೀಸಲಿಡಿ. ಒಂದು ಕೈಲಿ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಕೆಲಸ ಮಾಡಬೇಡಿ. ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾಗಿರುವ ಕರ್ನಾಟಕವು ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಕಸಿದುಕೊಳ್ಳುವ ಬದಲು ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕು. ಗೃಹಲಕ್ಷ್ನೀ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುತ್ತದೆ ಎಂದು ಕಿಡಿಕಾರಿದರು.
ಇದೇ ವೇಳೆ ಕೇಂದ್ರದ ಹಣ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಈ ಬಗ್ಗೆ ಚರ್ಚೆಗೆ ಬಿಜೆಪಿ ಸಿದ್ಧವಿದೆ ಎಂದರು. ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರಕ್ಕಿಂತ ಹೆಚ್ಚಿನ ಹಣವನ್ನು ಬಿಜೆಪಿ ಬಿಡುಗಡೆ ಮಾಡಿದೆ ಎಂದು ಹೇಳಿದರು.
ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರ ತೆಗೆಸಿರುವುದನ್ನು ವಿರೋಧಿಸಿ ದಲಿತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ರೀತಿ ನಡೆದಿಲ್ಲ, ಹೊಸ ಸರ್ಕಾರದ ಬಗ್ಗೆ ಕೆಟ್ಟ ಭಾವನೆ ಮೂಡಿಸಲು ಕೆಲ ಕಿಡಿಗೇಡಿಗಳು ನಡೆಸಿರುವ ಕೈವಾಡವಿದು ಎಂದು ಸಮರ್ಥಿಸಿಕೊಂಡರು.
ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರ ವಿರುದ್ಧವೂ ಇದೇ ರೀತಿಯ ಆರೋಪಗಳನ್ನು ಮಾಡಲಾಗಿತ್ತು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯುವ ಅಥವಾ ಆ ರೀತಿ ಮಾಡುವ ಯೋಚನೆಯನ್ನು ಯಾರೂ ಮಾಡುವುದಿಲ್ಲ ಎಂದರು.
ಪಕ್ಷದ ರಾಜ್ಯ ಘಟಕದಲ್ಲಿನ ಭಿನ್ನಾಭಿಪ್ರಾಯಗಳ ಕುರಿತ ಪ್ರಶ್ನೆಗೆ ಉತ್ತರಿಸಿ, ಭಿನ್ನಾಭಿಪ್ರಾಯಗಳಾವುದೂ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ ಎಂದು ಹೇಳಿದರು. ನಾವೆಲ್ಲರೂ ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದೆವೇಯೇ ಹೊರತು ಪಕ್ಷದಲ್ಲಿ ಯಾವುದೇ ಬಣ ಅಥವಾ ಗುಂಪುಗಳನ್ನಲ್ಲ ಎಂದು ಹೇಳಿದರು.

“ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಹಣ ಕಡಿತಗೊಳಿಸುವ ಮೂಲಕ ದಲಿತರ ಕಲ್ಯಾಣಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಯಾಮಾರಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯದ ಖಜಾನೆ ಖಾಲಿಯಾಗಿದೆ. ಈ ಮೂಲಕ ಜರನ್ನು ಭಿಕ್ಷುಕರನ್ನಾಗಿಸಿದೆ. ಕೆಳಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ.”

– ಬಿ.ಶ್ರೀರಾಮುಲು
ಮಾಜಿ ಸಚಿವರು

ಬೆಂಗಳೂರಿನ ಬಿಜೆಪಿ ಶಾಸಕರು & ಸಂಸದರ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಂಬರುವ ರಾಜ್ಯ ಬಜೆಟ್‌ನಲ್ಲಿ ನಗರದ ಅಭಿವೃದ್ಧಿಗೆ ಹೆಚ್ಚಿನ ಹಣ ಹಂಚಿಕೆ ಮಾಡುವಂತೆ ಮನವಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗವು ನಗರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 150 ಕೋಟಿ ರೂ. ಅನುದಾನ ನೀಡುವಂತೆ ಆಗ್ರಹಿಸಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.