Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರಿಗಳು ರೈತರಿಗೆ ಅಗತ್ಯ ದಾಖಲೆಗಳನ್ನು ಸೂಕ್ತ ಸಮಯಕ್ಕೆ ನೀಡಿ
(ರಾಜ್ಯ ) ಜಿಲ್ಲೆ

ಅಧಿಕಾರಿಗಳು ರೈತರಿಗೆ ಅಗತ್ಯ ದಾಖಲೆಗಳನ್ನು ಸೂಕ್ತ ಸಮಯಕ್ಕೆ ನೀಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ಬಿ.ಪಾಟೀಲ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಾಲೂಕು ಕೇಂದ್ರಗಳಲ್ಲಿ ನಾನಾ ಸರಕಾರಿ ಕಚೇರಿಗಳನ್ನು ಪ್ರಾರಂಭಿಸಿ ಜನರಿಗೆ ಸ್ಥಳೀಯವಾಗಿ ದಾಖಲೆಗಳು ಲಭ್ಯವಾಗಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಹಣ ಮತ್ತು ಸಮಯ ಉಳಿತಾಯವಾಗಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಔಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿದ್ದಾರೆ.
ಶನಿವಾರ ತಿಕೋಟಾದಲ್ಲಿ ಕಂದಾಯ ಇಲಾಖೆಯ ಭೂಮಾಪನ ಎ.ಡಿ.ಎಲ್.ಅರ್ ಕಚೇರಿ ಮತ್ತು‌ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಿಕೋಟಾ ತಾಲೂಕು ಗ್ಯಾರಂಟಿ ಸಮಿತಿ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಬಬಲೇಶ್ವರ ಮತಕ್ಷೇತ್ರದಲ್ಲಿ ಎರಡೂ‌ ತಾಲೂಕು ಕೇಂದ್ರಗಳಲ್ಲಿ ತಾಲೂಕು ಶಕ್ತಿ ಸೌಧ(ಮಿನಿ ವಿಧಾನಸೌದ) ನಿರ್ಮಿಸಲಾಗಿದೆ. ಈ ಮೂಲಕ ನಾನಾ ಸರಕಾರಿ ಕಚೇರಿಗಳನ್ನು ಒಂದೇ ಸೂರಿನಲ್ಲಿ ಪ್ರಾರಂಭಿಸಲಾಗಿದೆ. ಇದರಿಂದ ತಿಕೋಟಾ ಮತ್ತು ಬಬಲೇಶ್ವರ ತಾಲೂಕುಗಳ ಜನರು ಪಹಣಿ, ಆಕಾರಬಂದ ಸೇರಿದಂತೆ ನಾನಾ ದಾಖಲೆಗಳಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಅಲ್ಲದೇ, ಸಮಯ ಮತ್ತು ಹಣದ ಉಳಿತಾಯವೂ ಆಗಲಿದ್ದು, ಅವ್ಯವಹಾರಗಳಿಗೆ ಕಡಿವಾಣ ಬೀಳಲಿದೆ. ಅಧಿಕಾರಿಗಳು ಕೆಲಸಕ್ಕೆ ಬರುವ ರೈತರೊಂದಿಗೆ ಆತ್ಮೀಯವಾಗಿ ವರ್ತಿಸಿ ಅಗತ್ಯ ದಾಖಲೆಗಳನ್ನು ಸೂಕ್ತ ಸಮಯಕ್ಕೆ ನೀಡಬೇಕು‌ ಎಂದು ಅವರು ಹೇಳಿದರು.
ನಮ್ಮ‌ ಸರಕಾರ ಬಡವರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು‌ ಟೀಕಿಸುತ್ತಿದ್ದವರೇ ಈಗ ಅವುಗಳನ್ನು ನಕಲು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಇದೇ ವೇಳೆ ಸಚಿವರು‌ ನಾನಾ ರೈತರಿಗೆ ಭೂದಾಖಲೆ ಪ್ರತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾಲ‌ವಿಕಾಸ ಅಕಾಡೆಮಿ‌ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು‌ ಗೌಡನವರ, ಮುಖಂಡರಾದ ಸೋಮನಾಥ ಬಾಗಲಕೋಟ, ವಿಜುಗೌಡ ಎಂ. ಪಾಟೀಲ, ಆರ್. ಜಿ. ಯರನಾಳ, ಸಂತೋಷ ಕೋಲಾರ, ಯಮನಪ್ಪ ಮಲಕನವರ, ಸಿದ್ದಾರ್ಥ ಪರನಾಕರ, ಬಸಯ್ಯ ವಿಭೂತಿ, ಲೇಪು ಕೋಣ್ಣೂರ, ರಾಜುಗೌಡ ಪಾಟೀಲ, ಜಕ್ಕಪ್ಪ ಎಡವೆ, ಮಲಕು ಹಂಜಿಗೆ, ರುದ್ರಗೌಡ, ಶಿವಾನಂದ ಪಾಟೀಲ, ಡಾ. ಗಜಾನನ ಮಹಿಶ್ಯಾಳ, ಯಾಕೂಬ್ ಜತ್ತಿ, ಭಾಗೀರಥಿ ತೇಲಿ, ಪ್ರಭಾವತಿ ನಾಟೀಕಾರ, ಮಹಾದೇವಿ ಗೋಕಾಕ, ಗೀತಾಂಜಲಿ ಪಾಟೀಲ, ಗ್ಯಾರಂಟಿ‌ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ, ತಾಲೂಕು‌ ಅಧ್ಯಕ್ಷ ಗುರುಪಾದಗೌಡ ಸಿದ್ದನಗೌಡ ದಾಶ್ಯಾಳ, ಎಲ್ಲ ಸದಸ್ಯರು, ಜೆ.ಡಿ.ಎಲ್.ಆರ್ ನಜ್ಮಾ ಎಂ. ಪೀರಜಾದೆ, ಡಿ.ಡಿ.ಎಲ್.ಆರ್ ಮಹಾಂತೇಶ ಮುಳಗುಂದ, ಎ.ಡಿ.ಎಲ್.ಆರ್ ಮುರುಗೇಶ ರೂಡಗಿ, ತಹಸೀಲ್ದಾರ ಸುರೇಶ ಚವಲಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.