Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ.ಜಾತಿ, ಪ.ಪಂಗಡ ಮಕ್ಕಳಿಗೆ ವಿದೇಶ ವ್ಯಾಸಂಗಕ್ಕೂ ಅವಕಾಶ
(ರಾಜ್ಯ ) ಜಿಲ್ಲೆ

ಪ.ಜಾತಿ, ಪ.ಪಂಗಡ ಮಕ್ಕಳಿಗೆ ವಿದೇಶ ವ್ಯಾಸಂಗಕ್ಕೂ ಅವಕಾಶ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸಾಗಿತ್ತು ಎಂದು ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಬಸಂತಿ ಮಠ ಹೇಳಿದರು.
ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ತಂದೆ, ತಾಯಿ, ಬಂಧುಗಳು ಕೊಟ್ಟ ಆಸ್ತಿ, ಒಡವೆ, ಭೂಮಿ ಶಾಶ್ವತವಾಗಿ ಇರುವುದಿಲ್ಲ. ಆದರೆ ನಾವು ಪಡೆದ ವಿದ್ಯೆ ನಮ್ಮ ದೇಹದಲ್ಲಿ ಉಸಿರು ಇರುವವರೆಗೆ ಇರುತ್ತದೆ. ನಮ್ಮ ಒಳ್ಳೆಯ ಜೀವನ ನೋಡಲು ನಮ್ಮ ಪಾಲಕರು ದೊಡ್ಡ ಕನಸು ಇಟ್ಟುಕೊಂಡು ನಮ್ಮನ್ನು ಇಲ್ಲಿಗೆ ಕಳಿಸಿದ್ದಾರೆ ಎಂಬ ತಿಳುವಳಿಕೆ ನಮ್ಮಲ್ಲಿ ಬರಬೇಕು. ಪರಿಶಿಷ್ಟ ಜಾತಿ, ಜನಾಂಗದ ಮಕ್ಕಳಿಗೆ ಐಎಎಸ್, ಕೆಎಎಸ್ ಸೇರಿದಂತೆ ಉನ್ನತಮಟ್ಟದ ಅಭ್ಯಾಸಕ್ಕೆ ಸರ್ಕಾರ ಊಟ, ವಸತಿ ಸಹಿತ ಶಿಷ್ಯವೇತನ ನೀಡಿ ನಮಗೆ ಓದಲು, ಉನ್ನತ ವ್ಯಾಸಂಗ ಕಲಿತು ಪ್ರಗತಿ ಸಾಧಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳು ಇದನ್ನು ಅರಿತುಕೊಂಡು ಸಾಗಬೇಕು ಎಂದರು.
ಅತಿಥಿಯಾಗಿದ್ದ ಮಹಾಬಲೇಶ್ವರ ಗಡೇದ ಮಾತನಾಡಿ, ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವ ಅರಿತಿದ್ದ ಡಾ.ಅಂಬೇಡ್ಕರ್ ಅವರು, ಬಾಲಕಿಯರ ಉನ್ನತ ವ್ಯಾಸಂಗದವರೆಗೆ ಸಂಪೂರ್ಣ ಉಚಿತ ಸೌಲಭ್ಯಗಳನ್ನು ಸಂವಿಧಾನದ ಮೂಲಕ ಒದಗಿಸಿದ್ದಾರೆ. ಪಾಲಕರ ಕನಸು ನನಸಾಗಿಸಲು ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶ್ರದ್ಧೆಯಿಂದ ಓದಬೇಕು. ಪಠ್ಯ ಪುಸ್ತಕಗಳ ಜೊತೆಯಲ್ಲಿ ನಿತ್ಯ ದಿನಪತ್ರಿಕೆ, ಕಥೆ, ಲೇಖನ ಓದುವ ಮೂಲಕ ಜ್ಞಾನ ಸಂಪತ್ತು, ವ್ಯವಹಾರ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಯಶಸ್ಸು ಸಾಧಿಸಲು ದಿನಪತ್ರಿಕೆ ಓದುವದು ಅವಶ್ಯ ಎಂದರು.
ವಸತಿ ನಿಲಯ ಪಾಲಕಿ ರೇಣುಕಾ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಪರೀಕ್ಷೆಗಳು ಹತ್ತಿರ ಬಂದಿದ್ದು, ಕಾಲಹರಣ ಮಾಡದೇ ಅಭ್ಯಾಸ ಮಾಡಿ ಉತ್ತಮ ರೀತಿಯಲ್ಲಿ ಪರೀಕ್ಷೆಗಳನ್ನು ಬರೆದು ಯಶಸ್ಸು ಸಾಧಿಸಲು ಕರೆ ನೀಡಿದರು. ವಿದ್ಯಾರ್ಥಿನಿಯರಾದ ಅಕ್ಷತಾ ಚವ್ಹಾಣ, ಗಾಯತ್ರಿ ಚಲವಾದಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನೀಲಮ್ಮ ಚಲವಾದಿ ಸ್ವಾಗತಿಸಿದರು. ಗೀತಾ ಪವಾರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.