Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಶಿಕ್ಷಣ ಅವರ ಆಸಕ್ತಿಗನಗುಣವಾಗಿ ಸಾಗಬೇಕು :ಕೋರಿ
(ರಾಜ್ಯ ) ಜಿಲ್ಲೆ

ಮಕ್ಕಳ ಶಿಕ್ಷಣ ಅವರ ಆಸಕ್ತಿಗನಗುಣವಾಗಿ ಸಾಗಬೇಕು :ಕೋರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶಿಕ್ಷಣ ಎನ್ನುವದು ವಿದ್ಯಾರ್ಥಿಗಳಿಗೆ ಬಾಳಿನಲ್ಲಿ ಬೆಳಕು ತರುವಂತ ಸಾಧನವಾಗಿದೆ.ಆದರೆ ಅದು ಅವರ ಆಸಕ್ತಿಗನುಗುಣವಾಗಿ ಸಾಗಬೇಕೇ ವಿನಃ ಅವರ ಆಸಕ್ತಿಗೆ ವಿರುದ್ಧವಾಗಿ ಸಾಗಿದರೆ ಮಕ್ಕಳ ಬಾಳನ್ನು ಕತ್ತಲಾಗಿಸುವ ಸಾಧನಗಬಹುದೆಂದು ಸಾಹಿತಿ ಶಿಕ್ಷಕ ದಶರಥ ಕೋರಿ ತಿಳಿಸಿದರು.
ಇಂಡಿ ಪಟ್ಟಣದ ಪ್ರತಿಷ್ಠಿತ ಎಕ್ಸ್ ಲೆಂಟ್ ಆಂಗ್ಲ ಮಾಧ್ಯಮ ಹಾಗೂ ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ರಾಜ್ಯ ಸರಕಾರಿ ನೌಕರ ಸಂಘದ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಎಸ್ ಆರ್ ಪಾಟೀಲ ವಿಶೇಷ ಅಹ್ವಾನಿತರಾಗಿ ಮಾತನಾಡಿದರು. ಮಕ್ಕಳಲ್ಲಿರುವ ಅದ್ಭುತ ಶಕ್ತಿಯನ್ನು ಹೊರತರುವ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆ. ಶಿಕ್ಷಣದ ಮೂಲಕ ಸಂಸ್ಕೃತಿಯ ಅರಿವು ಮೂಡುತ್ತದೆ. ಸಂಸ್ಕಾರದ ಕೊರತೆಯಿಂದ ಕ್ರೌರ್ಯ ಬೆಳೆಯುತ್ತದೆ. ಈಗ ಅಂಕ ಮತ್ತು ಅತ್ಯುನ್ನತ ಶ್ರೇಣಿ ಕಡೆಗೆ ಹೋಗುತ್ತಿದ್ದೇವೆ. ವಿದ್ಯಾರ್ಥಿಗಳನ್ನು ಸದಾ ಜಾಗೃತ ಮನಸ್ಸಿನಲ್ಲಿಡುವ ಕಾರ್ಯ ನಡೆಯಬೇಕು. ಶಿಕ್ಷಣ ಮತ್ತು ಪರಿಸರ ದಿಂದ ಬದುಕುವ ಕಲೆಯ ಜಾಗೃತಿಯಾಗುತ್ತದೆ ಎಂದು ಹೇಳಿದರು.
ಇನ್ನೂ ಮುಖ್ಯ ಅತಿಥಿಯಾಗಿ ಸರಕಾರಿ ನೌಕರ ಸಂಘದ ನಿರ್ದೇಶಕ ರವಿ ಗಿಣ್ಣಿ, ವಿಜಯಕುಮಾರ್ ಬೇನಾಳಮಠ ಮಾತನಾಡಿದರು.
ಸಂಸ್ಥೆ ಅಧ್ಯಕ್ಷ ಎಸ್ ಬಿ ಕೆಂಬೋಗಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಯಲ್ಲಿ ಕೇವಲ ಪಠ್ಯ ಶಿಕ್ಷಣ ನೀಡುತ್ತಿಲ್ಲ.ಶಿಕ್ಷಣದ ಜೊತೆಗೆ ಮಕ್ಕಳ ಭವಿಷ್ಯಕ್ಕೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ನೀಡುವುದಲ್ಲದೆ ದೇಶ ಭಕ್ತಿಯನ್ನು ಮೈ ಮನಗಳಲ್ಲಿ ಉದ್ದೀಪನ ಮಾಡಲಾಗುತ್ತಿದೆ. ಸಂಸ್ಕಾರಯುತ ಶಿಕ್ಷಣದ ಮೂಲಕ ರಾಷ್ಟ್ರಭಕ್ತರ ನಿರ್ಮಾಣ ಸಂಸ್ಥೆಯ ಮೂಲಕ ನಡೆಯುತ್ತಿದೆ.ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಬೆಳಗಲು ಪೂರಕವಾದ ಶಿಕ್ಷಣ ನೀಡಿ ಮಕ್ಕಳನ್ನು ಬೆಳೆಸಲಾಗುತ್ತಿದೆ ಎಂದರು.
ಮಕ್ಕಳಿಗೆ ಓದುವ ಸ್ಪರ್ಧೆಗಿಂತ ಸಮಾಜವನ್ನು ಎದುರಿಸಲು ಬೇಕಾದ ಜಾಣ್ಮೆ, ಸಾಮರ್ಥ್ಯ ಕೌಶಲ್ಲವನ್ನು ನೀಡಬೇಕು.ಜೀವನದ ಕಲೆಯನ್ನು ಅನುಭವಿಸಲು ಸಾಧ್ಯವಾಗುವಂತ ಮೌಲ್ಯಗಳನ್ನು ನೀಡುವುದು ಅವಶ್ಯಕ ಎಂದು ಹೇಳಿದರು.
ಶಾಲಾ – ಕಾಲೇಜು ವಿಧ್ಯಾರ್ಥಿಗಳಿಂದ ಸಾಮಾಜಿಕ‌ ಹಾಗೂ ಹಾಸ್ಯ ನಾಟಕ, ಮಿಮಿ ಕ್ರಿಯೆ, ದೇಶ ಭಕ್ತಿಗೀತೆಗಳು, ನೃತ್ಯ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ಷ.ಬ್ರ ಶಿವಾನಂದ ಶಿವಾಚಾರ್ಯ ಕಲ್ಲಾಲಿಂಗ ಮಠ, ಕುಮಸಗಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಾ.ಪಂ ಸದಸ್ಯ ಪ್ರಕಾಶ ಮುಂಜಿ, ನಿಜಣ್ಣ ಕಾಳೆ, ಶಿಕ್ಷಕರಾದ ಪುಂಡಲೀಕ ಕಲ್ಮನಿ, ಆಲೇಗಾಂವ ಪವನ ಜೋಶಿ, ಸಂಗನಗೌಡ ಬಿರಾದಾರ, ರಮೇಶ್ ಕುಂಬಾರ ಜಗದೀಶ ರಾಠೋಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಾಧಕರಿಗೆ ಗೌರವ

ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನಗೈದ ಸಾಧಕರಾದ
ಶಿಕ್ಷಕ ಮಲ್ಲಿಕಾರ್ಜುನ ದೊಡ್ಡಮನಿ,
ಪೋಲಿಸ್ ಪೇದೆ ರಾಜಶೇಖರ ಪಡಗನವರ,ಅಗ್ನಿಶಾಮಕ ಪೋಲಿಸ್ ಮಲ್ಲಿಕಾರ್ಜುನ ಗೋಟ್ಯಾಳ, ಪರಿಸರ ಪ್ರೇಮಿ ಸಿದ್ದಣ್ಣ ಹಿಪ್ಪರಗಿ, ಪ್ರಗತಿಪರ ರೈತ ಮಲ್ಲಿಕಾರ್ಜುನ ಮೇತ್ರಿ ಅವರಿಗೆ
ಸನ್ಮಾನಿಸಿ ಗೌರವಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.