ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಾ.೨ರಂದು ಬೆಳಿಗ್ಗೆ ೯ಗಂಟೆಗೆ ಮಹಾಶಿವರಾತ್ರಿ ಪ್ರಯುಕ್ತ ಶಿವಸ್ಮೃತಿ ಕವಿಗೋಷ್ಠಿ ಜರುಗಲಿದೆ.
ಸಮಾರಂಭದ ಸಾನಿಧ್ಯವನ್ನು ಬ್ರಹ್ಮಾಕುಮಾರಿ ಈಶ್ವರೀಯ ಸಂಚಾಲಕಿ ಪವಿತ್ರಾಜಿ ವಹಿಸಲಿದ್ದಾರೆ. ಕವಿಗೋಷ್ಠಿಯನ್ನು ವಿಜಯಪುರದ ಕವಯತ್ರಿ ಶ್ರೀದೇವಿ ಉತ್ಲಾಸರ ಉದ್ಘಾಟಸಲಿದ್ದಾರೆ. ಅಧ್ಯಕ್ಷತೆಯನ್ನು ಯಾದಗಿರಿಯ ಸಾಹಿತಿ ಶಿವಶರಣಪ್ಪ ಶಿರೂರ ವಹಿಸಿಕೊಳ್ಳುವರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ, ಮಧ್ಯಾಹ್ನ ಉಪಹಾರ ಯೋಜನೆ ಸಹಾಯಕ ನಿರ್ದೇಶಕ ಅರವಿಂದ ಡೋಣೂರ ಇರಲಿದ್ದಾರೆ.
ಕವಿಗೋಷ್ಠಿಯಲ್ಲಿ ಸುಮಾರು ೧೫ಕ್ಕೂ ಹೆಚ್ಚು ಸಾಹಿತಿಗಳು ಕವನ ವಾಚನ ಮಾಡಲಿದ್ದಾರೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
