ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅರ್ಜುಣಗಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ವನಜಾಕ್ಷಿ ಬಡಿಗೇರ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ. ವಿಶ್ವವಿದ್ಯಾಲಯದ ಮಾನ್ಯತಾ ಸಂಸ್ಥೆಯಾದ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ಕೈಗೊಂಡು ಅವರು ಮಂಡಿಸಿದ “ತಿಂಥಣಿ ಮೌನೇಶ್ವರರ ಕುರಿತ ಸಾಹಿತ್ಯ : ಸ್ವರೂಪ ಮತ್ತು ವಿಶ್ಲೇಷಣೆ” ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ. ಇವರಿಗೆ ಚಡಚಣದ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಎಂ. ಎಸ್. ಮಾಗಣಗೇರಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವನಜಾಕ್ಷಿ ಬಡಿಗೇರ ಅವರಿಗೆ ಮಾನ್ಯತಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್.ಮದಭಾವಿ, ಸಂಯೋಜಕರಾದ ಡಾ. ವಿ. ಡಿ. ಐಹೊಳ್ಳಿ ಅಭಿನಂದನೆ ಸಲ್ಲಿಸಿದ್ದಾರೆ.

