Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವ ಶ್ರವಣ ದಿನಾಚರಣೆ: ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ವಿಶ್ವ ಶ್ರವಣ ದಿನಾಚರಣೆ: ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಸರ್ಕಾರಿ ನರ್ಸಿಂಗ ಕಾಲೇಜ ಹಾಗೂ ವಿವಿಧ ನರ್ಸಿಂಗ್ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಶ್ರವಣ ದಿನಾಚರಣೆಯ ಪ್ರಯುಕ್ತ ಸೋಮವಾರ ಬೆಳಿಗ್ಗೆ ಹಮ್ಮಿಕೊಂಡ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಡಾ.ಚನ್ನಮ್ಮ ಕಟ್ಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ತ ಗುಣಾರಿ ಜಂಟಿಯಾಗಿ ಚಾಲನೆ ನೀಡಿದರು.
ಈ ಜಾಥಾವು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದವರೆಗೆ ಬಂದು ಸಮಾರೋಪಗೊಂಡಿತು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಡಾ.ಚನ್ನಮ್ಮ ಕಟ್ಟಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಹೆಚ್ಚುತ್ತಿರುವ ಶಬ್ದಮಾಲಿನ್ಯದಿಂದ ಶ್ರವಣದೋಷ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರೇಡಿಯೋ, ಟಿ.ವಿ, ಮೊಬೈಲ್ ಶಬ್ದ ಸೇರಿದಂತೆ ಹೆಡ್ ಸೆಟ್‌ಗಳ ಅಧಿಕ ಬಳಕೆಯಿಂದಾಗಿ ಕಿವಿಯ ಒಳಭಾಗದ ನರಕೋಶಗಳು ದುರ್ಬಲಗೊಂಡು ಶ್ರವಣ ದೋಷಕ್ಕೆ ಎಡೆ ಮಾಡಿದಂತಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ತ ಗುಣಾರಿ ಮಾತನಾಡಿ, ಆಹಾರ ಪದಾರ್ಥಗಳನ್ನು ಅಗೆಯುವಾಗ ದವಡೆಯ ಚಲನೆಯಿಂದಾಗಿ ಸಹಜವಾಗಿ ಕಿವಿಯಲ್ಲಿನ ಸೂಕ್ಷ್ಮ ಹಾಗೂ ಸಣ್ಣ ಕುಗ್ಗೆ ಕಣಗಳು ತಾವಾಗಿಯೇ ಹೊರಬರುತ್ತವೆ. ಹಾಗಾಗಿ ಸ್ವಚ್ಛತೆಗಾಗಿ ಕಿವಿಯ ಒಳ ಭಾಗದ ಎಣ್ಣೆ, ಕಡ್ಡಿ, ಪಿನ್ನು, ಬಡ್ಸ್ ಗಳನ್ನು ಹಾಕುವುದರ ಬದಲಾಗಿ ಕಿವಿಯ ಹೊರಭಾಗದಲ್ಲಿ ಒದ್ದೆಬಟ್ಟೆಯಲ್ಲಿ ಕಿವಿಯ ಮೇಲ್ಭಾಗ ಸ್ವಚ್ಛ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಬಸವನ ಬಾಗೇವಾಡಿ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ದೊಡ್ಡಮನಿ, ಡಾ.ಪರಸುರಾಮ ಹಿಟ್ನಳ್ಳಿ, ಡಾ. ರವಿ ಅಂಬೇವಾಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಂ ಕೊಲೂರ, ಸುರೇಶ ಹೊಸಮನಿ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಸರ್ಕಾರಿ ನರ್ಸಿಂಗ್ ಶಾಲೆಯ ಮತ್ತು ವಿವಿಧ ನರ್ಸಿಂಗ್ ಕಾಲೇಜಗಳ ಉಪನ್ಯಾಸಕರು ವಿದ್ಯಾರ್ಥಿ, ವಿದ್ಯಾರ್ಥಿನೀಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.