Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ದಿನಾಚರಣೆಯಂದು ಮಹಿಳಾ ಸಾಂಸ್ಕೃತಿಕ ಹಬ್ಬ
(ರಾಜ್ಯ ) ಜಿಲ್ಲೆ

ಮಹಿಳಾ ದಿನಾಚರಣೆಯಂದು ಮಹಿಳಾ ಸಾಂಸ್ಕೃತಿಕ ಹಬ್ಬ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫” ಹಮ್ಮಿಕೊಳ್ಳಲಾಗಿದೆ.
ಈ ಮಹಿಳಾ ಸಾಂಸ್ಕೃತಿಕ ಹಬ್ಬದ ಅಂಗವಾಗಿ ಮ್ಯಾರಥಾನ್, ಜುಂಬಾ ಮತ್ತು ಯೋಗ ತರಬೇತಿ, ಮಹಿಳಾ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮತ್ತು ಆಹಾರ ಮೇಳ, ವಿವಿಧ ವಿಷಯಗಳ ಕುರಿತ ಕೌಶಲ ತರಬೇತಿ ಹಾಗೂ ಕಾರ್ಯಾಗಾರ, ರಸಪ್ರಶ್ನೆ ಕಾರ್ಯಕ್ರಮಗಳು, ಭಾಷಣ ಸ್ಪರ್ಧೆ, ಮತ್ತಿತರ ಸ್ಪರ್ಧೆಗಳು, ಶೈಕ್ಷಣಿಕ, ಕ್ರೀಡೆ, ಬಂಜಾರಾ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ‘ಎಲ್ಲಾ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ: ಹಕ್ಕುಗಳು, ಸಮಾನತೆ, ಸಬಲೀಕರಣ’ “ಹೆಣ್ಣು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ” ಕುರಿತು ವಿಚಾರ-ವಿನಿಮಯ ಮತ್ತು ವಿಶೇಷ ಉಪನ್ಯಾಸ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಉದ್ಘಾಟನಾ ಸಮಾರಂಭ:
‘ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫’ ಉದ್ಘಾಟನಾ ಸಮಾರಂಭವನ್ನು ಮಾರ್ಚ್ ೬ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಮಹಿಳಾ ವಿವಿಯ ಆಡಳಿತ ಭವನದ ಮುಖ್ಯ ವೇದಿಕೆಯಲ್ಲಿ ಆಯೋಜಿಸಲಾಗಿದ್ದು ಕಲಬುರಗಿಯ ಕರ್ನಾಟಕ ರಂಗಾಯಣ ನಿರ್ದೇಶಕಿ ಡಾ. ಸುಜಾತ ಜಂಗಮಶೆಟ್ಟಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ರೂಮಿ ಹರೀಶ ಅವರು ‘ಮಾನವ ಹಕ್ಕುಗಳೇ ಮಹಿಳಾ ಹಕ್ಕುಗಳು’ ಎಂಬ ವಿಷಯದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಎಲ್ಲ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ:
ದಿ.೮ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಭೀಮವ್ವ ಶಿಳ್ಳೇಕ್ಯಾತರ ಹಾಗೂ ಬೆಂಗಳೂರಿನ ಜಾನಪದ ಸಂಶೋಧಕಿ ಮತ್ತು ಕಲಾವಿದೆ ಶಿಲ್ಪಾ ಮುಡಬಿ ಕೋಥಾಕೋಟಾ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಎಲ್ಲ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ. ಲಕ್ಷಿö್ಮÃದೇವಿ ವೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದ್ದಾರೆ.
ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ದಿ.೪ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹಿಂದಿ ಅಧ್ಯಯನ ವಿಭಾಗದ ವತಿಯಿಂದ ‘ಹಿಂದಿ ಸಾಹಿತ್ಯದಲ್ಲಿ ಸ್ತಿçà ವಿಮರ್ಶೆ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ, ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ‘ಸಾಮಾಜಿಕ ಬದಲಾವಣೆಯ ವಿಚಾರಧಾರೆಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಜದಯ ಮಟ್ಟದ ವಿಚಾರ ಸಂಕಿರಣ, ಸ್ನಾತಕ ವಿಭಾಗದಿಂದ ‘ಸ್ಮಾರ್ಟ್ ಆಪ್ಟಿಕಲ್ ಮೊಮೆಂಟ್‌’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ, ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿ. ೫ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯದ ಸಹಯೋಗದಲ್ಲಿ ನಗರದಲ್ಲಿ ನಾಲ್ಕು ದಿಕ್ಕಿನಿಂದ ಮ್ಯಾರಥಾನ್ ಓಟ ಪ್ರಾರಂಭಿಸಿ ಗಾಂಧಿಚೌಕನಲ್ಲಿ ಸಭೆ ಸೇರುವುದು, ರಾಜ್ಯಶಾಸ್ತç ಅಧ್ಯಯನ ವಿಭಾಗದ ವತಿಯಿಂದ ‘ಭಾರತೀಯ ರಾಜಿಕೀಯ ಕ್ಷೇತ್ರದಲ್ಲಿ ಮಹಿಳರಯರ ಸಾಧನೆಗಳು’ ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ, ಅದೇ ದಿನ ಮಧ್ಯಾಹ್ನ ೩:೦೦ ಗಂಟೆಗೆ ‘ಭಾರತೀಯರ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಇತಿಹಾಸ ಅಧ್ಯಯನ ವಿಭಾಗದ ವತಿಯಿಂದ ‘ಪ್ರಸುತ್ತ ದಿನಮಾನಗಳಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು’ ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ ಹಾಗೂ ‘ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಗಳು ಹಮ್ಮಿಕೊಳ್ಳಲಾಗಿದೆ. ಅರ್ಥಶಾಸ್ತç ಅಧ್ಯಯನ ವಿಭಾಗದ ವತಿಯಿಂದ ‘ಮಹಿಳೆ ಮತ್ತು ಆರ್ಥಿಕತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.
ದಿ.೬ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯದ ವತಿಯಿಂದ ಮಹಿಳಾ ವಿವಿಯ ಎಲ್ಲಾ ವಿದ್ಯಾರ್ಥಿನಿಯರು, ಬೋಧಕ, ಮತ್ತು ಬೋಧಕೇತರ ಸಿಬ್ಬಂಧಿಗಳಿಗೆ ಆಡಳಿತ ಭವನದ ಹತ್ತಿರ ಜುಂಬಾ ಮತ್ತು ಏರೋಬಿಕ್ಸ, ಸಸ್ಯಶಾಸ್ತç ಅಧ್ಯಯನ ವಿಭಾಗದ ವತಿಯಿಂದ ‘ಸಾವಯವ ಮತ್ತು ಅಜೋಲಾ ಕೃಷಿ’ ಎಂಬ ವಿಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಪ್ರಸಾರಾಂಗ ವಿಭಾಗದಿಂದ ಪುಸ್ತಕ ಪ್ರದರ್ಶನ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗದ ವತಿಯಿಂದ ‘ಮಹಿಳಾ ಲೇಖಕಿಯರ ಪುಸ್ತಕ ಪ್ರದರ್ಶನ’, ಮಾನವನ ಹಕ್ಕುಗಳೇ ಮಹಿಳಾ ಹಕ್ಕುಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಪ್ರಾಯೋಜಕತ್ವದಲ್ಲಿ ಬಂಜಾರಾ ನೃತ್ಯ, ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫ ಉದ್ಘಾಟನೆ ಹಾಗೂ ಮಹಿಳಾ ಪ್ರದರ್ಶನ, ಮಾರಾಟ ಮಳಿಗೆಗಳು ಮತ್ತು ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ.
ದಿ. ೭ ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯದ ವತಿಯಿಂದ ಯೋಗಾ ಪ್ರದರ್ಶನ, ಹಾಗೂ ಮುಕ್ತ ಮಹಿಳಾ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮ, ‘ಸೈದ್ಪೇಸ್ ಮತ್ತು ಟೈಪ್‌ಸೆಟ್‌ನೊಂದಿಗೆ ಸಂಶೋಧನಾ ದಕ್ಷತೆಯನ್ನು ಹೆಚ್ಚಿಸುವುದು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ, ಸಸ್ಯಶಾಸ್ತç ವಿಭಾಗದ ವತಿಯಿಂದ ‘ಬೊಟಾನಿಕಲ್ ವಿವರಣೆಗಳು ಮೇಲೆ ರೇಖಾ ಚಿತ್ರ’, ಮಹಿಳಾ ವಿವಿಯ ಆರೋಗ್ಯ ಕೇಂದ್ರದ ವತಿಯಿಂದ ‘ಎಚ್‌ಬಿ ತಪಾಸಣೆ ಶಿಬಿರ, ಜೈವಿಕ ಮಾಹಿತಿ ಅಧ್ಯಯನ ವಿಭಾಗದ ವತಿಯಿಂದ ‘ಪುಷ್ಪ ಕೃಷಿ ಹೂಗುಚ್ಚ ತಯಾರಿಕೆ ಹಾಗೂ ಜೈವಿಕ ಗೊಬ್ಬರ ಉತ್ಪಾದನೆ’ ಕುರಿತ ತರಬೇತಿ, ಕವಿಗೋಷ್ಠಿ, ಅನನ್ಯ ಆಹಾರ ಸಂಸ್ಕರಣಾ ಮತ್ತು ತರಬೇತಿ ಕೇಂದ್ರದ ವತಿಯಿಂದ ‘ದ್ರಾಕ್ಷಿ ಹಣ್ಣುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧಿತ ಆಹಾರೋತ್ಪನ್ನಗಳ’ ಕುರಿತ ಒಂದು ದಿನದ ತರಬೇತಿ ಕಾರ್ಯಕ್ರಮ ಹೀಗೆ ಮೂರು ದಿನಗಳ ಕಾಲ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಕರು, ವಿವಿಧ ಸಂಘ ಸಂಸ್ಥೆಯವರು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಈ ಕಾರ್ಯಕ್ರಮಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ. ಲಕ್ಷಿö್ಮÃದೇವಿ ವೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.