Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ಸತ್ಸಂಗದಿಂದ ಅಂತರಂಗ ಪರಿಶುದ್ಧ :ಪ್ರೊ.ಬೆಳಗಲಿ
(ರಾಜ್ಯ ) ಜಿಲ್ಲೆ

ಶರಣರ ಸತ್ಸಂಗದಿಂದ ಅಂತರಂಗ ಪರಿಶುದ್ಧ :ಪ್ರೊ.ಬೆಳಗಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೧೨ನೇ ಶತಮಾನದ ಬಸವಾದಿ ಶರಣರ ವಚನಗಳು ನಿತ್ಯ, ಸತ್ಯ ಬದುಕಿನ ಶ್ರೇಷ್ಠತೆಯನ್ನು ಜಗತ್ತಿಗೆ ನೀಡಿದವರು. ಅಂತಹ ಶರಣರ ಸತ್ಸಂಗದಿಂದ ಅಂತರಂಗ ಪರಿಶುದ್ಧವಾಯಿತು. ಅಂತಹ ಶ್ರೇಷ್ಠ ಶರಣರಲ್ಲಿ ಡೋಹರ ಕಕ್ಕಯ್ಯ ಒಬ್ಬರು ಎಂದು ಪ್ರೊ. ಬಿ.ಎಸ್. ಬೆಳಗಲಿ ಹೇಳಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ವತಿಯಿಂದ ಲಿಂಗಾಯತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಶರಣ ಡೋಹರ ಕಕ್ಕಯ್ಯನವರ ಬದುಕು ಬರಹ ಕುರಿತು ಉಪನ್ಯಾಸ ನೀಡುತ್ತ ಅವರು ಕಾಯಕ, ದಾಸೋಹ, ಸಮಾನತೆ ಪರಿಶುದ್ಧತೆ ಎಲ್ಲವೂ ಡೋಹರ ಕಕ್ಕಯ್ಯನವರ ವಚನದಲ್ಲಿ ಅಡಕವಾಗಿದೆ. ಬಸವಣ್ಣನವರಿಗಿಂತ ಹಿರಿಯರಾದರೂ ಆಧ್ಯಾತ್ಮದ ಹಸಿವನ್ನು ನೀಗಿಸಲು ಪುಣೆಯ ಹಳ್ಳ್ಳಿಯಿಂದ ಕಲ್ಯಾಣಕ್ಕೆ ಬಂದು ಅನುಭಾವಿಗಳಾಗಿ ಅಭಿನವ ಚನ್ನಮಲ್ಲಿಕಾರ್ಜುನ ಅಂಕಿತನಾಮ ಇಟ್ಟುಕೊಂಡು ವಚನಗಳನ್ನು ರಚಿಸಿದ್ದಾರೆ. ಆರು ವಚನಗಳು ಲಭ್ಯವಾಗಿವೆ ಅವೆಲ್ಲವೂ ಸಮಾನತೆಗಾಗಿ ರಚಿಸಿದಂತಹವುಗಳು ಎಂದರು.
ಡಾ. ಸಂಗಮೇಶ ಮೇತ್ರಿ ಮಾತನಾಡಿ ಡೋಹರ ಕಕ್ಕಯ್ಯ ಕೆಳಸ್ತರದ ವ್ಯಕ್ತಿ ಗುರು, ಲಿಂಗ, ಜಂಗಮ, ದಾಸೋಹ ಕಲ್ಪನೆ ಇತ್ತು. ಸಾಮಾಜಿಕ ಸಾಮರಸ್ಯ ಬರಬೇಕು ಎನ್ನುವ ಉದ್ದೇಶವಿತ್ತು. ಚರ್ಮ ಹದ ಮಾಡುವ ಕಾಯಕದ ಜೊತೆಗೆ ಸಿದ್ಧಾಂತ, ಪ್ರಸಾದ, ನಡೆ, ನುಡಿ, ಅನುಸರಿಸಿ ಬಂದವರು. ಮುಟ್ಟದಕಾರಣ ಬಯಲು ಬಯಲಾದೆನು ಎಂದು ವಚನಗಳಲ್ಲಿ ವ್ಯಕ್ತವಾಗಿದೆ ಎಂದರು.
ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ ಶರಣರಿಗೆ ಸಮಾನತೆ ತರಬೇಕು. ಕಾಯಕ, ದಾಸೋಹ, ಅನುಭಾವ ಈ ಮೂಲಕವಾಗಿಯೇ ಸಮಾಜದಲ್ಲಿ ಹಿರಿಮೆಯನ್ನು ಕಂಡುಕೊಂಡವರು ಡೋಹರ ಕಕ್ಕಯ್ಯನವರು. ಕಾಯಕ, ದಾಸೋಹದ ಬಗ್ಗೆ ವ್ಯಕ್ತಿತ್ವದ ವಿವರಣೆ ಮಾನವೀಯ ಮೌಲ್ಯಗಳು, ಚಾರಿತ್ರಿಕ ಹಿನ್ನಲೆ ಜೀವಂತ ಸಾಕ್ಷಿ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರಧಾನ ಕಾರ್ಯದರ್ಶಿ ಬಿ.ಟಿ. ಈಶ್ವರಗೊಂಡ ಸ್ವಾಗತಿಸಿದರು. ಡಾ. ಸುಭಾಸಚಂದ್ರ ಕನ್ನೂರ ಪರಿಚಯಿಸಿದರು. ಸಾಹಿತಿ ಸಂಗಮೇಶ ಬದಾಮಿ ನಿರೂಪಿಸಿದರು. ನಿರ್ದೇಶಕ ವಿಠ್ಠಲ ತೇಲಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸಹದೇವ ನಾಡಗೌಡರ, ಮಲ್ಲಿಕಾರ್ಜುನ ಅಮರಣ್ಣವರ, ಭೀಮಣ್ಣ ಭಜಂತ್ರಿ, ಮಹಾದೇವ ಹಾಲಳ್ಳಿ, ಜಂಬುನಾಥ ಕಂಚ್ಯಾಣಿ, ಈರಣ್ಣ ತೊಂಡಿಕಟ್ಟಿ, ಡಾ. ವಿ.ಡಿ. ಐಹೊಳ್ಳಿ ದಂಪತಿ, ಬ್ಯಾಕೋಡ ದಂಪತಿ ಡಾ. ಎಂ.ಎಸ್. ಮಾಗಣಗೇರಿ, ಶರಣಗೌಡ ಪಾಟೀಲ, ಎಂ.ಜಿ. ಯಾದವಾಡ, ದ್ರಾಕ್ಷಾಯಣಿ ಬಿರಾದಾರ, ಎಸ್.ಎನ್. ಶಿವಣಗಿ ಉಪಸ್ಥಿತರಿದ್ದರು. ಹಿರಿಯರು, ಮಹಿಳೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.