Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಪ್ರೀತಿ ವಾತ್ಸಲ್ಯದ ಭೂಮಿ :ನ್ಯಾಯಾಧೀಶ ನಲವೆಡೆ
(ರಾಜ್ಯ ) ಜಿಲ್ಲೆ

ವಿಜಯಪುರ ಪ್ರೀತಿ ವಾತ್ಸಲ್ಯದ ಭೂಮಿ :ನ್ಯಾಯಾಧೀಶ ನಲವೆಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರವು ಪ್ರೀತಿ, ವಿಶ್ಚಾಸ, ನಂಬಿಕೆ ವಾತ್ಸಲ್ಯದ ಭೂಮಿಯಾಗಿದೆ. ಇಲ್ಲಿಯ ಜನರ ನಡೆ ನುಡಿ ಗಮನಿಸಿದ್ದೇನೆ, ಇಲ್ಲಿಯ ವಕೀಲರ ವೈಖರಿ ಶಿಸ್ತುಬದ್ದವಾಗಿದೆ, ವಿಜಯಪುರದಲ್ಲಿ ಬಸವಣ್ಣ, ಸಿದ್ದೇಶ್ವರ ಶ್ರೀಗಳು ಜನಿಸಿದ ನಾಡಲ್ಲಿ ಸೇವೆ ಸಲ್ಲಿಸಿದ್ದು ನನ್ನ ಪುಣ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಧೀಶರಾಗಿ ಸೇವೆ ಸಲ್ಲಿಸಿ ವಿಜಯಪುರದಲ್ಲಿ ನಿವೃತ್ತಿಯಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವೆಡೆ ಹೇಳಿದರು.
ಅವರಿಗೆ ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಪೆನಾಲ್ ವಕೀಲರು, ಮದ್ಯಸ್ಥಗಾರರು ಇವರುಗಳ ಸಂಯುಕ್ತಾಶ್ರಯದಲ್ಲಿ ನ್ಯಾಯಾಂಗ ಅಧಿಕಾರಿಗಳ ಸಭಾಭವನದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.
ಎಲ್ಲರೂ ಸಹಕಾರ ನೀಡಿದ್ದರಿಂದ ಉತ್ತಮ ಸೇವೆ ಸಾಧ್ಯವಾಗಿದೆ ಎಂದು ವಿವರಿಸಿದ ನಲವೆಡೆ ಅವರು, ವಿಜಯಪುರ ಪವಿತ್ರ ಭೂಮಿಯಲ್ಲಿ ನಿವೃತ್ತಿ ಹೊಂದಿರುವುದರ ಬಗ್ಗೆ ಹೆಮ್ಮೆಯ ವಿಚಾರ ಎಂದು ನುಡಿದರು
ಸಮಾರಂಭದ ಅಧ್ಯಕ್ಷತೆವಹಿಸಿದ್ದ ಪ್ರಭಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಮಾ ನಾಯಕ ಅವರು ಮಾತನಾಡಿ, ಶಿವಾಜಿ ಅನಂತ ನಲವೆಡೆ ಅವರ ಸೇವೆಯ ಬಗ್ಗೆ ಶ್ಲಾಘಿಸಿದರು.
ಮುಖ್ಯ ಅತಿಥಿ ಸ್ಥಾನವಹಿಸಿದ್ದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸುಭಾಷ ಸಂಕದ ಅವರು ಮಾತನಾಡಿ, ನಲವೆಡೆ ಸಾಹೇಬರ ತಾಳ್ಮೆ, ಹಸನ್ಮುಖದ ಸೇವೆ ಖುಷಿ ತಂದಿದೆ ಎಂದು ತಿಳಿಸಿದರು.
ಹಿರಿಯ ವಕೀಲರಾದ ಮಲ್ಲಿಕಾರ್ಜುನ ಭೃಂಗಿಮಠ ಅವರು ಮಾತನಾಡಿ “ಶಿವನಡೆ ನಿವೃತ್ತಿಕಡೆ” ಶೀರ್ಷಿಕೆಯ ಕವಿತೆಯ ಮೂಲಕ ನಿವೃತ್ತಿ ಜೀವನಕ್ಕೆ ಶುಭ ಕೋರಿ, ನಲವೆಡೆ ಸಾಹೇಬರು ನ್ಯಾದಾನದಲ್ಲಿ ಅತ್ಯಂತ ತಾಳ್ಮೆಯಿಂದ ನಿಭಾಯಿಸಿದ ಅವರ ಸೇವೆ ವಿಜಯಪುರ ಜಿಲ್ಲೆಗೆ ಸಿಕ್ಕಿರುವುದು ಸಂತೋಷಕರ ಸಂಗತಿಯಾಗಿದೆ ನಲವಡೆ ಅವರು ನುಡಿದಂತೆ ನಡೆದವರು,ಸದಾ ಸತ್ಯದ ದಾರಿಯಲ್ಲೆ ಸಾಗಿ ಬಂದವರು ಎಂದು ಬಣ್ಣಿಸಿದರು.
ಹಿರಿಯ ವಕೀಲರಾದ ಪ್ರಕಾಶ ಉಡುಪಿಕರ , ಆರ್ .ಎಸ್ .ನಂದಿ,ಮಂಜುಳಾ ಅರಕೇರಿ, ಉಸ್ಮಾನ ಕುರಿ ಅಲ್ಗೂರು ಇತರರು ಮಾತನಾಡಿದರು.
ಜಿಲ್ಲಾ ನ್ಯಾಯಾಧೀಶರಾದ ಸತೀಷ ಎಲ್ .ಪಿ, ಶ್ರೀ ಎಮ್ .ಬಿ.ಪಾಟೀಲ್ ಪಾಟೀಲ್, ಸಿಂಧೂ ಪೊತ್ದಾರ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅಂಬಲಿ, ಲೋಕೇಶ, ರಮೇಶ ಮಹಾಜನ, ಮಹೇಶ ಚಂದ್ರಕಾಂತ, ಸಮೀರ ಕೊಳ್ಳಿ, ಸಿವಿಲ್ ನ್ಯಾಧೀಶರುಗಳಾದ ಪರಿಮಳ ಟುಬಕಿ, ವಿಶ್ವನಾಥ ಯಮಕನಮರಡಿ, ಸ್ಮಿತಾ, ಚಂದ್ರಕಾಂತ, ಸುನೀಲಕುಮಾರ ಅವರುಗಳು ಪಾಲ್ಗೊಂಡಿದ್ದರು,
ಹಿರಿಯ ವಕೀಲರಾದ ರಾಜೀವ ಬಿದರಿ, ಡಿ.ಬಿ.ಮಠದ, ಮಲ್ಲಿಕಾರ್ಜುನ ಲೋಗಾವಿ, ಬಸವರಾಜ ಮಠ, ಅಶೋಕ ಜೈನಾಪುರ, ರಾಜೇಶ ಯಳಸಂಗಿಮಠ, ರಾಜೇಶ್ವರಿ ಪಾಟೀಲ್, ದೀಪಾ, ಜಾವೀದ ಗುಡಗುಂಟಿ, ವಿ.ಜೆ ಖುದಾನಪುರ, ಬಿ.ಕೆ ಮಠ, ಜಯಶ್ರೀಮಠಪತಿ, ಶುಷ್ಮಾ ದೇಸಾಯಿ, ಉಮೇಶ ರಾಠೋಡ, ಒಡೆಯರ, ಬಡಗೇರ, ಮುಂತಾದ ಪೆನಾಲ್ ವಕೀಲರು ಪಾಲ್ಗೊಂಡಿದ್ದರು
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ ಅವರು ಪ್ರಸ್ತಾವಿಕ ಮಾತುಗಳನ್ನಾಡಿ ಕಾನೂನು ಸೇವೆಗಳ ಪ್ರಾಧಿಕಾರವು ನಲವಡೆ ಅವರ ಅಧ್ಯಕ್ಷತೆಯಲ್ಲಿ ಬೆಳೆದು ಬಂದ ಯಶಸ್ವಿ ದಾರಿಯ ಬಗ್ಗೆ ವಿವರಿಸಿದರು. ಮಂಜೂಳ ನಿರೂಪಿಸಿದರು,ಉಸ್ಮಾನ ಕುರಿ ಆಲ್ಗೂರು ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.