ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೧೧೦/೧೧ ಕೆವಿ ಕೆರೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ೧೧ ಕೆ.ವ್ಹಿ ವಿದ್ಯುತ್ ಮಾರ್ಗಗಳಲ್ಲಿ ಮಾರ್ಚ್ ೬ರ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೬ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
