ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ತಮಿಳು, ತೆಲಗು, ಮಲಯಾಳಂ, ಮರಾಠಿ ಹಾಗೂ ಫ್ರೆಂಚ್ ಭಾಷಾ ಪರೀಕ್ಷೆಗೆ ನೊಂದಾಯಿಸಿಕೊಂಡ ೧೨೯೮ ವಿದ್ಯಾರ್ಥಿಗಳ ಪೈಕಿ ೧೨೧೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ೮೩ ಅಭ್ಯರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದರು. ಇಂದು ನಡೆದ ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಆಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
