ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಶಿಬಿರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ,ಮಹಾವಿದ್ಯಾಲಯದ ಕೆರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಲ್ ವಿಭಾಗದ ಮತ್ತು ಎಸ್ ಬಿ ವಿಸ್ಡಮ್ ಕರಿಯರ್ ಅಕಾಡೆಮಿಯ ಸಂಯುಕ್ತಾಶ್ರಯದಲ್ಲಿ ಬಿ ಎ,
ಬಿಎಸ್ಸಿ, ಬಿಸಿಎ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ 15 ದಿನಗಳ ಶಿಬಿರವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಜನಾಂಗ ಮೊಬೈಲ್ ಫೋಬಿಯಾಗೆ ಒಳಗಾಗಿದೆ. ಸಮಾಜಿಕ ಜಾಲತಾಣಗಳು, ಮೊಬೈಲ್, ಯುವ ಜನಾಂಗವನ್ನು ಕಟ್ಟಿ ಹಾಕಿದೆ. ಅದು ವಿದ್ಯಾರ್ಥಿಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದೆ. ವಿದ್ಯಾರ್ಥಿಗಳು ಅಂತರ್ಜಾಲವನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ಸಾಮಾಜಿಕ ಮಾಧ್ಯಮ, ಆನ್ಲೈನ್ ಕಲಿಕಾ ಸಾಧನಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮ ಪದವಿಯಲ್ಲಿಯೇ ಸ್ಪರ್ಧಾತ್ಮಕ ಮನೋಭಾವ ಮತ್ತು ಪರೀಕ್ಷೆಗಳ ಬಗ್ಗೆ ನಿರಂತರ ಅಧ್ಯಯನ ಮಾಡಲು ಪ್ರಾರಂಭಿಸಬೇಕು. ಇಂದಿನ ಇಂಟರ್ನೆಟ್ ಯುಗದಲ್ಲಿ ಯುಟ್ಯೂಬ್, ಗೂಗಲ್ ನಂತಹ ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮಗಳಿಂದ ಸುಲಭವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಗತಿಗಳನ್ನು ಕೇಳಬಹುದು. ಸ್ಪರ್ಧಾತ್ಮಕ ಪರೀಕ್ಷೆ ಗಳ ತಯಾರಿಯಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಆನ್ಲೈನ್ ಕಲಿಕಾ ಸಾಧನಗಳ ಪಾತ್ರವನ್ನು ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಇನ್ನೋರ್ವ ಮುಖ್ಯ ಅತಿಥಿಗಳಾಗಿ ಮಾತನಾಡಿದ ಭಾಗೇಶ ಮರಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸತತ ಪರಿಶ್ರಮ, ನಿರಂತರವಾದ ಅಧ್ಯಯನ ಇರಬೇಕು ಹಾಗೂ ಒಂದು ಪರೀಕ್ಷೆ ಎದುರಿಸಿ ಕಡಿಮೆ ಅಂಕ ಬಂದಿದೆ ಎಂದು ನಿರಾಶರಾಗದೆ ನಿರಂತರ ಪ್ರಯತ್ನ ಶೀಲರಾಗಿ ಅಭ್ಯಸಿಸಬೇಕು.ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ. ಅನಿಲ್ ನಾಯಕ್ ಮಾತನಾಡಿದರು
ಈ ಸಂದರ್ಭದಲ್ಲಿ ಐಕ್ಯೂಎಸಿ ನಿರ್ದೇಶಕರಾದ ಡಾ.ಪಿ ಎಸ್ ಪಾಟೀಲ್, ನ್ಯಾಕ್ ಸಂಯೋಜಕ ಡಾ.ಕೆ.ಮಹೇಶಕುಮಾರ ಹಾಗೂ ಮಹಾವಿದ್ಯಾಲಯದ ಕೆರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಲ್ ವಿಭಾಗದ ಸಂಯೋಜಕರಾದ ಡಾ.ಅಮಿತ್ ತೇರದಾಳೆ,ಪ್ರೊ. ಎಂ ಎಸ್ ಜೇವೂರ, ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

