Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣ ಚಿಂತನೆಗಳನ್ನು ಬಿತ್ತರಿಸುವಲ್ಲಿ ಶಸಾಪ ಕಾರ್ಯ ಶ್ಲಾಘನೀಯ
(ರಾಜ್ಯ ) ಜಿಲ್ಲೆ

ಶರಣ ಚಿಂತನೆಗಳನ್ನು ಬಿತ್ತರಿಸುವಲ್ಲಿ ಶಸಾಪ ಕಾರ್ಯ ಶ್ಲಾಘನೀಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ನಾಡಿನಲ್ಲಿ ಹನ್ನೆರಡನೇ ಶತಮಾನದ ಬಸವಾದಿ ಶರಣರ ಸಂದೇಶಗಳನ್ನು ಬಿತ್ತರಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಶಿವಲಿಂಗೇಶ್ವರ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಶಿವಾನುಭವ ಸವಿನೆನಪು, ಲಿಂ.ಶಾಂತಾಬಾಯಿ ಮೇಟಿ, ವಿರುಪಾಕ್ಷಪ್ಪ ಆಲಗೂರ, ಲಿಂ.ಷಣ್ಮುಖಪ್ಪ ಶೀಲವಂತ ಸ್ಮರಣಾರ್ಥ ಶನಿವಾರ ಹಮ್ಮಿಕೊಂಡಿದ್ದ ದತ್ತಿ ಸ್ಮರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶರಣ ಸಾಹಿತ್ಯ ಪರಿಷತ್ತು ಅಗಲಿದ ಹಿರಿಯರ ಸ್ಮರಣಾರ್ಥವಾಗಿ ದತ್ತಿ ಸ್ಮರಣೆ ಕಾರ್ಯಕ್ರಮ, ವಿವಿಧ ಕಾರ್ಯಕ್ರಮ, ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶರಣರ ಸಂದೇಶ ಜನಮಾನಸಕ್ಕೆ ಮುಟ್ಟಿಸುತ್ತಿದೆ ಎಂದರು.
ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಕುರಿತು ಪ್ರವಚನಕಾರ ಬಸಯ್ಯ ಹಿರೇಮಠ ಮಾತನಾಡಿ, ಬಸವೇಶ್ವರರು ಸರ್ವಸಮಾಜದ ಸಮಾನತೆಗಾಗಿ, ಏಕತೆಗಾಗಿ, ಜಾತಿಧರ್ಮವೆನ್ನದೇ ಎಲ್ಲರನ್ನು ಒಂದುಗೂಡಿಸುವದಕ್ಕಾಗಿ ಜನಿಸಿದರು.
ಸಮಾಜದ ಉದ್ಧಾರಕ್ಕಾಗಿ ಉದಯಿಸಿದ ಬಸವೇಶ್ವರರು ಹುಟ್ಟಿದಾಗಲೇ ಸಾಂಸ್ಕ್ರತಿಕ ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಭಾರತ ಸಂಸ್ಕಾರವಂತ ದೇಶವಾಗಿದೆ ಎಂದರು.
ಮುದ್ದೇಬಿಹಾಳ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ನಾಲತವಾಡ ಮಾತನಾಡಿ, ೧೨ ನೇ ಶತಮಾನದ ಶರಣರ ವಚನಗಳು ಯುವಜನಾಂಗಕ್ಕೆ ಮಾರ್ಗದರ್ಶಿಯಾಗಿವೆ. ಶರಣರ ವಚನಗಳು ನಮಗೆ ಬದುಕನ್ನು ಕಲಿಸುತ್ತವೆ. ವಚನಗಳನ್ನು ಅರ್ಥೈಸಿಕೊಂಡು ಬದುಕಿದರೆ ಜೀವನ ಸುಂದರವಾಗುತ್ತದೆ. ವಚನ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ, ಎಂ.ಎಂ.ಕಲಬುರ್ಗಿ, ಉತ್ತಂಗಿ ಚನ್ನಪ್ಪ ಸೇರಿದಂತೆ ಹಲವರ ಕೊಡುಗೆ ಮರೆಯುವಂತಿಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ ಮಾತನಾಡಿ,ಧಾರ್ಮಿಕ ಕಾರ್ಯಕ್ರಮಗಳು ಮನಸ್ಸಿಗೆ ನೆಮ್ಮದಿ ನೀಡುತ್ತವೆ ಎಂದರು.
ಚಂದ್ರಶೇಖರ ನಾಗರಾಳ, ಸಾಹಿತಿ ಗಿರಿಜಾ ಪಾಟೀಲ, ಡಾ.ಭೀಮಾಶಂಕರ ಹಡಪದ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಫ್.ಡಿ.ಮೇಟಿ, ವಿರೇಶ ಕುಂಟೋಜಿ, ಎಚ್.ಎಸ್.ಬಿರಾದಾರ, ಸಾವಿತ್ರಿ ಕಲ್ಯಾಣಶೆಟ್ಟಿ, ದತ್ತಿ ದಾನಿಗಳ ಬಂಧುಗಳು ಇತರರು ಇದ್ದರು. ಎಸ್.ಎಲ್.ಓಂಕಾರ ಪ್ರಾರ್ಥಿಸಿದರು. ಆರ್‌.ಜಿ.ಅಳ್ಳಗಿ ಪ್ರಾಸ್ತವಿಕವಾಗಿ ಮಾತನಾಡಿದರು. ಜಿ.ಬಿ.ಕನ್ನೂರ ಸ್ವಾಗತಿಸಿದರು. ಎಸ್.ಐ.ಮನಗೂಳಿ ನಿರೂಪಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ಎಂಎಸ್ಸಿಯಲ್ಲಿ ಮೂರನೇ ರ್‍ಯಾಂಕ್ ಪಡೆದ ತಾಲೂಕಿನ ನಾಗವಾಡದ ತೇಜಶ್ವಿನಿ ಖೇಡದ, ಎಂ.ಎ.ಯಲ್ಲಿ ರ್‍ಯಾಂಕ್ ಪಡೆದ ರೋಹಿಣಿ ಕಂಬಾಳೆ, ಡಾಕ್ಟರೇಟ್ ಪದವಿ ಪಡೆದ ಪ್ರಾಧ್ಯಾಪಕ ಭೀಮಾಶಂಕರ ಹಡಪದ ಅವರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.