Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಪ್ಪಳದ ಬಲ್ಡೋಟಾ ಕಾರ್ಖಾನೆ ಕೆಲಸಕ್ಕೆ ಸಿಎಂ ಬ್ರೇಕ್!
(ರಾಜ್ಯ ) ಜಿಲ್ಲೆ

ಕೊಪ್ಪಳದ ಬಲ್ಡೋಟಾ ಕಾರ್ಖಾನೆ ಕೆಲಸಕ್ಕೆ ಸಿಎಂ ಬ್ರೇಕ್!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ | ಕಾರ್ಖಾನೆ ಸ್ಥಾಪನೆಯ ಎಲ್ಲ ಸಿದ್ದತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌) ಕಾರ್ಖಾನೆ ಸ್ಥಾಪನೆಯ ಎಲ್ಲಾ ಸಿದ್ದತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಲ್‌ ಅರಸಿದ್ದಿ ಅವರಿಗೆ ಮಂಗಳವಾರ (ಮಾ.4) ಸೂಚಿಸಿದ್ದಾರೆ.
ಬಿಎಸ್‌ಪಿಎಲ್‌ ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿರುವುದು ಜನರ ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಈ ಸಂಬಂಧ ಇತ್ತೀಚೆಗೆ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ಕರೆ ನೀಡಿದ್ದ ಜಿಲ್ಲಾ ಬಂದ್‌ ಯಶಸ್ವಿಯಾಗಿತ್ತು. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮಿ, ರೈತರು, ಹೋರಾಟಗಾರರು ಮತ್ತು ಜನ ಸಾಮಾನ್ಯರು ಕಾರ್ಖಾನೆ ವಿರೋಧಿಸಿ ಪ್ರತಿಭಟಿಸಿದ್ದರು.
ಹೋರಾಟದ ಮುಂದಿನ ಹಂತವಾಗಿ (ಮಾ.4) ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ಪ್ರಮುಖರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಕಾರ್ಖಾನೆ ವಿಸ್ತರಣೆ ಮಾಡಿದರೆ ಜಿಲ್ಲಾಕೇಂದ್ರಕ್ಕೆ ವಿಪರೀತ ದೂಳು ಬರುತ್ತದೆ. ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಕಾರ್ಖಾನೆ ಕೆಲಸವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.
ಜಿಲ್ಲಾ ಉಸ್ತುವಾರಿ ಶಿವರಾಜ ತಂಗಡಗಿ ನೇತೃತ್ವದ ನಿಯೋಗದಲ್ಲಿ ಸಂಸದ ರಾಜಶೇಖರ ಹಿಟ್ನಾಳ, ರಾಘವೇಂದ್ರ ಹಿಟ್ನಾಳ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕ ಗಾಲಿ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮುಖಂಡರಾದ ವೀರೇಶ ಮಹಾಂತಯ್ಯನಮಠ, ಸಂತೋಷ ದೇಶಪಾಂಡೆ, ಶರಣಪ್ಪ ಸಜ್ಜನ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಶಾಸಕರಾದ ಕೆ.ಬಸವರಾಜ ಹಿಟ್ನಾಳ, ಕೆ. ಶರಣಪ್ಪ ಕರಿಯಣ್ಣ ಸಂಗಟಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು, ಸಂಘಟನೆಗಳ ಪ್ರಮುಖರು ಇದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಕೆಶಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ, ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ ನಂತರ ಖರ್ಗೆಯೊಂದಿಗಿನ 20 ನಿಮಿಷಗಳ ಕಾಲ ನಡೆದ ಈ ಸಭೆ ಮಹತ್ವ ಪಡೆದುಕೊಂಡಿದೆ.
ಈ ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಡಿಸೆಂಬರ್ ವೇಳೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುತ್ತಾರೆ ಎಂದು ಡಿಕೆ ಶಿವಕುಮಾರ್ ಅವರ ಕಟ್ಟಾ ಬೆಂಬಲಿಗರಾಗಿರುವ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಭಾನುವಾರ ಹೇಳಿದ್ದಾರೆ.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷರು, ನಾನೇ ಅವರನ್ನು ಗೌರವಿಸದಿದ್ದರೆ, ಬೇರೆ ಯಾರನ್ನು ನಾನು ಗೌರವಿಸಬೇಕು? ಬದಲಿಗೆ ನಾನು ಬಿಜೆಪಿ ಕಚೇರಿಗೆ ಹೋಗಬೇಕೇ? ನಮ್ಮ ಹೊಸ ಕಚೇರಿಯ ನಿರ್ಮಾಣವನ್ನು ನಾನು ನೋಡಿಕೊಳ್ಳುತ್ತಿದ್ದೇನೆ ಮತ್ತು ಭೂಮಿಪೂಜೆ ಸಮಾರಂಭಕ್ಕೆ ಅವರ ಲಭ್ಯತೆಯನ್ನು ಕೇಳಿದ್ದೇನೆ. ಇದಕ್ಕಿಂತ ಹೆಚ್ಚಿನದನ್ನು ಚರ್ಚಿಸಿಲ್ಲ ಎಂದರು.
ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ಅವರ ಸೂಚನೆಗಳನ್ನು ಪಾಲಿಸುತ್ತಿದ್ದೇನೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.