ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಬಸವಯುಗದ ವಚನ ಮಹಾ ಸಂಪುಟ-೧ ಹಾಗೂ ಬಸವೋತ್ತರ ಯುಗದ ವಚನ ಮಹಾಸಂಪುಟ-೨ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕೆ ಲಭ್ಯವಿದೆ.
ಈ ಎರಡು ಸಂಪುಟಗಳು ಸೇರಿ ೬೦೦ ರೂ. ಬೆಲೆ ಇದ್ದು, ಆಸಕ್ತರು ಪುಸ್ತಕಗಳನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
