ಶ್ರೀ ಜಗದ್ಗುರು ರೇಣುಕಾಚಾರ್ಯರ, ಶ್ರೀ ಯೋಗಿನಾರಾಯಣ ಯತೀಂದ್ರರ ಹಾಗೂ ಶ್ರೀ ಅಗ್ನಿಬನ್ನಿ ರಾಯಸ್ವಾಮಿ ಜಯಂತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾರ್ಚ್ ೧೨ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ, ಮಾರ್ಚ್೧೪ರಂದು ಶ್ರೀ ಯೋಗಿನಾರಾಯಣ ಯತೀಂದ್ರರ ಹಾಗೂ ಮಾರ್ಚ್ ೨೮ರಂದು ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಗುರುವಾರ ಅಪರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅವರು, ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿ ಅಂಗವಾಗಿ ಮಾ.೧೨ರಂದು ಬೆಳಿಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯು ಶ್ರೀ ಕಂದಗಲ್ ಹಣುಮಂತರಾಯ ರಂಗಮಂದಿರದವರೆಗೆ ನಡೆಯಲಿದೆ.ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು. ಮಾ.೧೪ರಂದು ಶ್ರೀ ಯೋಗಿನಾರಾಯಣ ಯತೀಂದ್ರರ ಹಾಗೂ ಮಾ.೨೮ರಂದು ಶ್ರೀ ಅಗ್ನಿಬನ್ನಿ ರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಣಯಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪಿ.ಎಸ್.ಕೋಲಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸೋಮನಗೌಡ ಕಲ್ಲೂರು, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
