Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಮಾಧ್ಯಮ ಕಾರ್ಯಾಗಾರದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲತೆ ರೂಢಿಸಿಕೊಳ್ಳುವ ಮೂಲಕ ತಮ್ಮ ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಬಿ.ವಿ ದರ್ಬಾರ್ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಸಭಾಂಗಣದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುರುವಾರ ಹಮ್ಮಿಕೊಂಡ ಮಾಧ್ಯಮ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರಂತರ ಕಲಿಕೆಯಿಂದ ಅಧ್ಯಯನಶೀಲರಾಗುವುದರೊಂದಿಗೆ ಉತ್ತಮ ಗುರಿಯನ್ನಿಟ್ಟುಕೊಂಡು ಉನ್ನತ ಸ್ಥಾನ ಪಡೆಯುವ ಮೂಲಕ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.
ಪತ್ರಕರ್ತರಾದ ಪರಶುರಾಮ ಭಾಸಗಿ ಅವರು ಮಾತನಾಡಿ, ಮಾಧ್ಯಮ ಎಂದರೆ ಮಾಹಿತಿ, ಮನರಂಜನೆ ಹಾಗೂ ಶಿಕ್ಷಣದ ಕುರಿತ ಮಾಹಿತಿಯನ್ನು ಕನ್ನಡಿಯ ರೀತಿಯಲ್ಲಿ ಜನರಿಗೆ ಮುಟ್ಟಿಸುವ ಕೌಶಲ್ಯವಾಗಿದೆ. ಸತತ ಅಧ್ಯಯನ, ಪ್ರತಿ ವಿಷಯವನ್ನು ಅರಿತುಕೊಳ್ಳುವ ಹಂಬಲ, ಇಚ್ಛಾಶಕ್ತಿಯೊಂದಿಗೆ ಈ ಕೌಶಲ್ಯಗಳನ್ನು ರೂಢಿಸಿಕೊಂಡಲ್ಲಿ ಭವಿಷ್ಯದಲ್ಲಿ ವಿಫುಲ ಅವಕಾಶಗಳು ದೊರೆಯುತ್ತವೆ ಎಂದು ಅವರು ಹೇಳಿದರು.
ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಮಾಧ್ಯಮ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದೆ. ಮಾಧ್ಯಮ ಕ್ಷೇತ್ರ ಎಲ್ಲ ರಂಗಗಳಲ್ಲೂ ಇದೆ. ಬರವಣಿಗೆಯಲ್ಲಿ ಚಿಂತನೆಗಳ ಮೆರವಣಿಯಾಗಬೇಕು. ಮಾಧ್ಯಮ ಕ್ಷೇತ್ರವನ್ನು ಪ್ರಾಯೋಗಿಕವಾಗಿ ಕಲಿಯಬೇಕು. ಅರ್ಹತೆ ಗಳಿಸಿದರೆ ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ. ಯಾವುದೇ ಸಾಮಾಜಿಕ ಸುಧಾರಣೆಗೆ ಮಾಧ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಾತಿನ ಶೈಲಿ ಕರಗತ ಮಾಡಿಕೊಳ್ಳಬೇಕು, ನಿರಂತರ ಕಲಿಯುವಿಕೆ ರೂಢಿಸಿಕೊಳ್ಳಬೇಕು, ಮಾಧ್ಯಮ ಕ್ಷೇತ್ರಗಳಲ್ಲಿ ವಿವಿಧ ಅವಕಾಶಗಳಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ನಮ್ಮ ವಿದ್ಯೆ ಬುದ್ಧಿ ಕೌಶಲ್ಯ ಪ್ರತಿಭೆ ಗಳಿಸುವತ್ತ, ಗುರಿ ಇಟ್ಟುಕೊಂಡು ನಡೆಯಬೇಕು ಎಂದು ಹೇಳಿದ ಅವರು, ಪತ್ರಿಕೋದ್ಯಮ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿಕೊಟ್ಟರು.
ಬಿ.ವಿ.ದರಬಾರ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಜಿ.ಎಚ್.ಮಣ್ಣೂರ ಅವರು ಮಾತನಾಡಿ, ಪತ್ರಿಕೆಗಳನ್ನು ಓದುವ ಗುಣ ಬೆಳೆಸಿಕೊಳ್ಳಬೇಕು. ಸಮಯ ಪ್ರಜ್ಞೆ ರೂಢಿಸಿಕೊಳ್ಳಬೇಕು. ಕರೋನ ಕಾಲಘಟ್ಟದಲ್ಲೂ ಮಾಧ್ಯಮ ಕ್ಷೇತ್ರ ಅದ್ಭುತವಾಗಿ ಕಾರ್ಯನಿರ್ವಹಿಸಿದೆ. ಚಿಕಿತ್ಸಕ ಮನೋಭಾವನೆ, ಹೊಸದನ್ನು ಕಲಿಯುವ ಹಂಬಲ ಹೊಂದಬೇಕು ಎಂದು ಅವರು ಕಿವಿಮಾತು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ, ಶಿಕ್ಷಕಿ ರಶ್ಮಿ ಪಾಟೀಲ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.