ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಅತ್ತ್ಯುತ್ತಮವಾಗಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಹೇಳಿದ್ದಾರೆ.
ವಿಜಯಪುರ ಜಿಲ್ಲೆಗಂತೂ ಬಂಪರ್ ಕೊಡುಗೆ ದೊರಕಿದೆ. ನಿಡಗುಂದಿಯಲ್ಲಿ ಪ್ಲ್ಯಾಟ್ ಫ್ಯಾಕ್ಟರಿ ಸ್ಥಾಪನೆ, ಮುದ್ದೇಬಿಹಾಳದಲ್ಲಿ ಕೃಷಿ ವಿಜ್ಞಾನ ಕೇಂದ್ರ, ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದ ಸಹಾಯ ಧನ ಪಡೆಯುವ ನಿಟ್ಟಿನಲ್ಲಿ ಪ್ರಸ್ತಾವನೆ ಹೀಗೆ ವಿಜಯಪುರ ಪ್ರಗತಿಗೆ ಪೂರಕವಾದ ಬಜೆಟ್ ಇದಾಗಿದೆ, ರಾಜ್ಯದ ದೃಷ್ಟಿಯಿಂದ ನೋಡುವುದಾದರೆ ಎಲ್ಲ ವಲಯಗಳಿಗೂ ಆದ್ಯತೆ ದೊರಕಿದಂತಾಗಿದೆ ಎಂದು ಶಕೀಲ್ ಬಾಗಮಾರೆ ಪ್ರತಿಕ್ರಿಯಿಸಿದ್ದಾರೆ.

