Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಲೋಕ ಅದಾಲತ್: ರಾಜಿ ಸಂಧಾನದ ಮೂಲಕ ೧೯೭೯ ಪ್ರಕರಣಗಳು ಇತ್ಯರ್ಥ
(ರಾಜ್ಯ ) ಜಿಲ್ಲೆ

ಲೋಕ ಅದಾಲತ್: ರಾಜಿ ಸಂಧಾನದ ಮೂಲಕ ೧೯೭೯ ಪ್ರಕರಣಗಳು ಇತ್ಯರ್ಥ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.
ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೭೭೭೧ ಬಾಕಿ ಇರುವ ಪ್ರಕರಣಗಳ ಪೈಕಿ ೨೩೭೦ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪ್ರಕರಣಗಳಲ್ಲಿ ಒಟ್ಟು ೧೯೭೯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಅದರಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್‌ಎಸಿ ಇಪಿ, ಎಮ್‌ವಿಸಿ ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು ಪೂರ್ವದಾವೆ ಪ್ರಕರಣಗಳಲ್ಲಿ, ಟ್ರಾಫಿಕ್ ಚಲನ್ ಪ್ರಕರಣಗಳು, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಹಾಗೂ ಬ್ಯಾಂಕಿನ ಪ್ರಕರಣಗಳು ಹೀಗೆ ಒಟ್ಟು ೧೮೬೬ ಪ್ರಕರಣಗಳಲ್ಲಿ ೮೯೭ ಪ್ರಕರಣಗಳು ರಾಜಿ ಸಂಧಾನದ ಮೂಲಕ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಿರಿಯ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೊಲಗಿಡದ ಇವರುಗಳು ರಾಜೀ ಸಂಧಾನದ ಮೂಲಕ ಇತ್ಯರ್ಥ್ ಪಡಿಸಿದರು.
ಸಂಧಾನಕಾರರಾಗಿ ಶೋಭಾ ಪಾಟೀಲ ಹಾಗೂ ಕುಮಾರಿ ರೇಣುಕಾ ಪಾಟೀಲ ವಕೀಲರುಗಳು, ಎಪಿಪಿ ಬಸವರಾಜ ಆಹೇರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ತಾಲೂಕಾ ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ನ್ಯಾಯಾಲಯದ ಸಿಬ್ಬಂದಿಗಳಾದ ವಾಯ್.ಎಮ್. ತಳವಾರ, ಜಯಶ್ರೀ ಇಂಚುರ, ಸುರೇಶ ಬಳಗಾನೂರ. ವಿ.ಸಿ.ಶಿವಣಗಿ, ಪುನೀತ ದೊಡ್ಡಮನಿ, ಜ್ಯೋತಿ ಹೆಬ್ಬಾಳ, ಬಸವರಾಜ ಬೂದಿಹಾಳ, ನರ್ಮದಾ ಮರೋಳ, ಗೀತಾ ರಾಂಪೂರ, ರೇಣುಕಾ ಜಾನಮಟ್ಟಿ, ಸುಮಿತ್ರಾ ಕುಂಬಾರ, ಮಹಾಂತೇಶ ಹಚ್ಚರೆಡ್ಡಿ, ಮಂಜುಳಾ ಹೊಸಮನಿ, ನಾಗು ಮದಿಹಳ್ಳಿ, ಮಧು ಧರ್ಮಗಿರಿ, ನಾಗಮ್ಮ ಹೂಗಾರ, ಶ್ರುತಿ ಜಾಯಿ, ಸುಷ್ಮಾ ಬಾನಿ, ಇಸಾಕ್ ಒಂಟಿ, ಹಿರಿಯ ನ್ಯಾಯವಾದಿಗಳಾದ ವಿ.ಎಮ್.ನಾಗಠಾಣ, ಜೆ.ಎ.ಚಿನಿವಾರ, ಎಸ್.ಆರ್.ಸಜ್ಜನ, ಎನ್.ಜಿ.ಕುಲಕರ್ಣಿ, ಎನ್.ಆರ್.ಮೊಕಾಶಿ, ಎಮ್.ಆರ್.ಪಾಟೀಲ, ಆಯ್.ಎಸ್.ಹಗಟಗಿ ನ್ಯಾಯವಾದಿಗಳಾದ ಎಸ್.ಆರ್.ಜೋಗಿ, ಚೇತನ ಶಿವಶಿಂಪಿ, ಸಾಬಣ್ಣ ಚಳ್ಳಗಿ, ಬಿ.ಎ.ಚಿನಿವಾರ, ರಶ್ಮಿ ಕುಲಕರ್ಣಿ, ಎಚ್.ಟಿ.ಪೂಜಾರಿ, ಬಿ.ಎಮ್.ಮುಂದಿನಮನಿ, ಎಸ್.ಎಂ.ಕಿಣಗಿ, ಎಲ್.ಎಸ್.ಮೇಟಿ, ಎಂ.ಬಿ.ಬಿರಾದಾರ, ಆರ್.ಎಸ್.ತುಪ್ಪದ, ಬಿ.ವೈ.ಮೇಟಿ, ಎಚ್.ಜಿ.ನಾಗೋಡ ಸೇರಿದಂತೆ ಇತತರು ಭಾಗಿಯಾಗಿದ್ದರು.

ಕಕ್ಷೀದಾರನಲ್ಲಿಗೇ ಬಂದ ನ್ಯಾಯಾಧೀಶರು

ಲೋಕ್ ಅದಾಲತ್ ನಲ್ಲಿ ಪರಕರಣಗಳ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವಾಗ ಹಿರಿಯ ಜೀವಿಯೊಬ್ಬರು ನಡೆಯಲು ಬಾರದ ಸ್ಥಿತಿಯಲ್ಲಿದ್ದರು. ನ್ಯಾಯಾಲಯದ ದ್ವಾರದ ಬಳಿ ಕುಳಿತಿದ್ದ ಆತನ ಬಳಿ ಸ್ವತಃ ತಾವೇ ಎದ್ದು ಹೋದ ಕಿರಿಯ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಳಗಿಡದ ಅವರು ಎದುರು ನಿಂತುಕೊಂಡೇ ಪಕ್ಷಗಾರರ ಸಮಕ್ಷಮ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಮಾನವೀಯತೆ ಮೆರೆದರು.

“ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳ ಪೈಕಿ ರಾಜಿ ಸಂಧಾನ ಮಾಡಿಕೊಳ್ಳಲು ಇಚ್ಛಿಸಿರುವ ಬ್ಯಾಂಕಿನ ಸಿಬ್ಬಂದಿಗಳು ತಮ್ಮ ಗ್ರಾಹಕರಿಗೆ ಒಂದು ತಿಂಗಳ ಮುಂಚಿತವಾಗಿ ನೊಟೀಸು ನೀಡಬೇಕು. ಪ್ರತೀ ಮೂರು ತಿಂಗಳಿಗೊಮ್ಮೆ ನಡೆಯುವ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವಲ್ಲಿ ಸಹಕರಿಸಿ. ಇಲ್ಲಿ ಇತ್ಯರ್ಥವಾದ ಪ್ರಕರಣದ ಕೋರ್ಟ ಫೀ ನಿಮಗೆ ಮರಳಿ ಸಿಗಲಿದೆ. ಅದರ ಉಪಯೋಗ ಪಡೆದುಕೊಳ್ಳಿ.”

– ರವೀಂದ್ರಕುಮಾರ ಕಟ್ಟಿಮನಿ
ಹಿರಿಯ ಸಿವಿಲ್ ನ್ಯಾಯಾಧೀಶರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.