Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಲ್ಲ ಕಾಯಕ ಬಂಧುಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಿ :ಸಂಕಗೊಂಡ
(ರಾಜ್ಯ ) ಜಿಲ್ಲೆ

ಎಲ್ಲ ಕಾಯಕ ಬಂಧುಗಳು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಿ :ಸಂಕಗೊಂಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಲೂಕು ಮಟ್ಟದ ಕಾಯಕ ಬಂಧುಗಳ ತರಬೇತಿಯ ಸಮಾರೋಪ ಸಮಾರಂಭ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ತಾಲೂಕು ಪಂಚಾಯತ ಸಬಾಭವನದಲ್ಲಿ ಗ್ರಾಮ ಸ್ವರಾಜ್ ಅಭಿಯಾನ ಹಾಗೂ ತಾಲೂಕು ಪಂಚಾಯತಿ ತಿಕೋಟಾ ಅವರ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಕಾಯಕ ಬಂಧುಗಳ ತರಬೇತಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ತಾಲೂಕು ಪಂಚಾಯತಿಯ ಮನರೇಗಾ ಸಹಾಯಕ ನಿರ್ದೇಶಕ ಬಸವರಾಜ ಸಂಕಗೊಂಡ ಅವರು ಮಾತನಾಡಿದರು.
ನರೇಗಾ ಯೋಜನೆಯ ಅನುಷ್ಠಾನದಲ್ಲಿ ಕಾಯಕ ಬಂದುಗಳ ಪಾತ್ರ ಅತೀ ಮಹತ್ವದ್ದಾಗಿದೆ ಹಾಗೂ ಪ್ರಾಥಮಿಕ ಅವಶ್ಯಕತೆಯಾಗಿದೆ. ಹೀಗಾಗಿ ತಾಲೂಕು ಪಂಚಾಯತಿ ಹಾಗೂ ಗ್ರಾಮ ಸ್ವರಾಜ್ ಅಭಿಯಾನದ ಸಹಯೋಗದಲ್ಲಿ ಈ ತರಬೇತಿಯನ್ನು ನೀಡಲಾಗಿದೆ. ಈಗಾಗಲೇ ಎಲ್ಲಾ ೦೭ ಬ್ಯಾಚ್‌ಗಳಲ್ಲಿ ಪೂರ್ಣಗೊಳ್ಳುವುದರ ಜೊತೆಗೆ ತರಬೇತಿ ಯಶಸ್ವಿಯಾಗಿದೆ ಎಂದರು.
ಎಲ್ಲಾ ಕಾಯಕಬಂಧುಗಳು ಈ ತರಬೇತಿಯನ್ನು ಅತ್ಯಂತ ಜಾಗೃಕತೆಯಿಂದ ತರಗತಿಗಳನ್ನು ಆಲಿಸಿದ್ದಾರೆ, ಸಂಪನ್ಮೂಲ ವ್ಯಕ್ತಿಗಳು ಸಹ ಅತ್ಯಂತ ಕ್ರೀಯಾಶೀಲರಾಗಿ ತರಹತಿಗಳನ್ನು ನಡೆಸಿಕೊಟ್ಟಿದ್ದಾರೆ ಎಂದರು. ಈ ತರಬೇತಿಯು ಸರಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳ ನಡುವೆ ನಡೆದ ಪ್ರಥಮ ತರಬೇತಿಯಾಗಿದೆ. ಈ ತರಬೇತಿಯಲ್ಲಿ ನೀವು ಪಡೆದುಕೊಂಡ ಮಾಹಿತಿಯನ್ನು ಮುಂದಿನ ದಿನಮಾನದಲ್ಲಿ ನಿಮ್ಮ ಗ್ರಾಮ ಪಂಚಾಯತಿಯ ಇತರೆ ಕಾಯಕ ಬಂದುಗಳಿಗೆ ಹಾಗೂ ಮನರೇಗಾ ಕೂಲಿಕಾರರಿಗೆ ತಿಳಿಸಿ ಹೇಳಬೇಕು ಎಂದರು.
ನಂತರ ಮಾತನಾಡಿದ ಸರೋಜಾ ಕೌಲಾಪುರ, ಗ್ರಾಮ ಸ್ವರಾಜ್ ಅಭಿಯಾನ ರಾಜ್ಯ ಸಮಿತಿ ಸದಸ್ಯರು ಮಾತನಾಡಿ, ನರೇಗಾ ಯೋಜನೆಯ ಬಗ್ಗೆ ಸಂಕ್ಷಿಪ್ತ ವಿವರವನ್ನು ಕಾರ್ಯಕ್ರಮದಲ್ಲಿ ತಿಳಿಸಿದರು.
ತಾಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ಕಲ್ಲಪ್ಪ ನಂದರಗಿ ಮಾತನಾಡಿ, ಬರುವ ಆರ್ಥಿಕ ವರ್ಷದಲ್ಲಿ ಈ ತರಬೇತಿಯು ಮನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಲಿದೆ. ಮುಂದಿನ ದಿನಮಾನದಲ್ಲಿ ಈ ತರಬೇತಿಯ ಪ್ರತಿಫಲ ಎಲ್ಲ ಗ್ರಾಮಗಳಿಗೂ ವ್ಯಾಪಿಸಲಿದೆ. ಈ ಯೋಜನೆಯಡಿ ಕೆಲಸ ನಿರ್ವಹಿಸುವ ಕಾಯಕ ಬಂಧುಗಳು ಕೇವಲ ತಮ್ಮ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸದೇ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಾರೆ ಎಂಬ ವಿಷಯವನ್ನು ಅವರಿಗೆ ಮನವರಿಕೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಸ್ವರಾಜ್ ಅಭಿಯಾನದ ರಾಜ್ಯ ಮಟ್ಟದ ತರಬೇತಿದಾರ ರಮೇಶ ಭಜಂತ್ರಿ, ತಾಲೂಕು ಐಇಸಿ ಸಂಯೋಜಕ ಹಾಗೂ ಗ್ರಾಮ ಸ್ವರಾಜ್ ಅಭಿಯಾನದ ಜಿಲ್ಲಾ ಮಟ್ಟದ ತರಬೇತಿದಾರರಾದ ಕಲ್ಲಪ್ಪ ನಂದರಗಿ, ಗ್ರಾಮ ಸ್ವರಾಜ್ ಅಭಿಯಾನದ ಜಿಲ್ಲಾ ಮಟ್ಟದ ತರಬೇತಿದಾರರಾದ ಸರೋಜಾ ರಾಠೋಡ, ದಯಗೊಂಡ ಬೆಳ್ಳನ್ನವರ, ಬಿ.ಎಫ್.ಟಿ ಸಿದ್ರಾಯ ದಾಶ್ಯಾಳ, ತಾಲೂಕು ಪಂಚಾಯತಿಯ ಇಮ್ತಿಯಾಜ ಜಮಾದಾರ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿಯ ಕಾಯಕ ಬಂಧುಗಳು ಹಾಜರಿದ್ದರು.

೩೦೦ ಜನರಿಗೆ ತರಬೇತಿ ನೀಡುವ ಗುರಿ

ದಿನಾಂಕ: ೨೭.೦೧.೨೦೨೫ ರಿಂದ ಆರಂಭವಾದ ಈ ತರಬೇತಿಯು ೦೭ ತಂಡಗಳಲ್ಲಿ ಪ್ರತಿ ತಂಡಕ್ಕೆ ೦೩ ದಿನಗಳಂತೆ ತರಬೇತಿ ನೀಡಲಾಗಿದೆ. ಎರಡು ದಿನ ತರಗತಿಯಲ್ಲಿ ತರಬೇತಿ ನೀಡಿದ್ದರೆ ಒಂದು ದಿನ ಕ್ಷೇತ್ರ ಭೇಟಿ ಅಧ್ಯಯನ ಕೈಗೊಳ್ಳುವ ಮೂಲಕ ಕಾಯಕ ಬಂಧುಗಳಿಗೆ ಪ್ರಾಯೋಗಿಕ ಅಧ್ಯಯನ ಕೈಗೊಂಡು ಅವರಿಗೆ ಯೋಜನೆಯ ಕುರಿತು ಪ್ರಾಯೋಗಿಕ ಜ್ಞಾನವನ್ನು ನೀಡಲಾಗಿದೆ ಎಂದರು. ಸರ್ಕಾರದ ಆದೇಶದಂತೆ ಒಟ್ಟು ೩೦೦ ಜನರಿಗೆ ತರಬೇತಿ ನೀಡಲು ಗುರಿ ನೀಡಲಾಗಿದ್ದು, ಅದರಂತೆ ಗುರಿಗನುಸಾರ ಕಾಯಕ ಬಂದುಗಳಿಗೆ ತರಬೇತಿಯನ್ನು ನೀಡಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.