ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರತಿಯೊಬ್ಬರ ಬದುಕಿನಲ್ಲೂ ಮಹಿಳೆಯ ಪಾತ್ರ ಇದ್ದೇ ಇರುತ್ತದೆ. ಹಲವು ಜವಾಬ್ದಾರಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಕುಟುಂಬವನ್ನು ಸುಂದರವಾಗಿ ಮುನ್ನಡೆಸುವ ಶಕ್ತಿ ಮಹಿಳೆಗಿದೆ ಎಂದು ನ್ಯಾಯವಾದಿ ರಾಜಶೇಖರ ಚೌರ ಹೇಳಿದರು.
ಸಿಂದಗಿ ಪಟ್ಟಣದ ಗ್ಲೋಬಲ್ ಸ್ಮಾರ್ಟ್ ಕಿಡ್ಸ್ ಪೂರ್ವ ಪ್ರಾಥಮಿಕ ಹಾಗೂ ಇಂದಿರಾಗಾಂಧಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳೆಯರಿಗಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ವಿವಿಧ ರೀತಿಯ ಚಟುವಟಿಕ ಆಟಗಳನ್ನು ಆಡಿಸಿ ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.೭೦ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಮಹಿಳೆಯರು ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.
ಈ ವೇಳೆ ವಿಜೇತರಾದ ಮಹಿಳೆಯರಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಗುರುಮಾತೆ ರೇಖಾ ಕಟಕೆ ಸೇರಿದಂತೆ ಶಾಲೆಯ ಸಹ ಶಿಕ್ಷಕಿಯರು ಇದ್ದರು.

