Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೧೨ ರಂದು ಬಸವನಬಾಗೇವಾಡಿಯಲ್ಲಿ ಹಲಗೆ ಬಾರಿಸುವ ಸ್ಪರ್ಧೆ
(ರಾಜ್ಯ ) ಜಿಲ್ಲೆ

ಮಾ.೧೨ ರಂದು ಬಸವನಬಾಗೇವಾಡಿಯಲ್ಲಿ ಹಲಗೆ ಬಾರಿಸುವ ಸ್ಪರ್ಧೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಇದೇ ಪ್ರಥಮ ಬಾರಿಗೆ ಹೋಳಿ ಹಬ್ಬದಂಗವಾಗಿ ಬಸವೇಶ್ವರ ಸೇವಾ ಸಮಿತಿಯಿಂದ ಹಲಗೆ ಬಾರಿಸುವ ಸ್ಪರ್ಧೆಯನ್ನು ಮಾ.೧೨ ರಂದು ಸಂಜೆ ೪ ಗಂಟೆಗೆ ಸ್ಥಳೀಯ ಹಳೆಸಂತೆ ಕಟ್ಟೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ನಿರ್ದೇಶಕ ಎಂ.ಜಿ.ಆದಿಗೊಂಡ ಹೇಳಿದರು.
ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಹೋಳಿ ಹಬ್ಬ ಸಮೀಪಿಸುತ್ತಿದ್ದಂತೆ ಪಟ್ಟಣ ಸೇರಿದಂತೆ ಎಲ್ಲೆಡೆ ಹಲಗೆ ವಾದನ ಆರಂಭಗೊಂಡಿದ.ಬಣ್ಣದಾಟದವರೆಗೂ ಹಲಗೆ ಬಾರಿಸುವ ಕಲೆ ಮೆರೆಯಲಿದೆ. ಹಲಗೆ ಬಾರಿಸುವದು ವಿಶಿಷ್ಠ ಕಲೆಯಾಗಿದೆ. ಈ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ಹಲಗೆ ಬಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಪಟ್ಟಣದಲ್ಲಿ ಈಚೆಗೆ ಹೋಳಿ ಹಬ್ಬವು ಕಳೆಗುಂದುತ್ತಿದೆ. ಮುಂದಿನ ಪೀಳಿಗೆಗೆ ಹೋಳಿ ಹಬ್ಬದ ಮೆರಗು ಗೊತ್ತಾಗಬೇಕು. ಎಲ್ಲ ಬಾಂಧವರು ಸೌಹಾರ್ದತೆಯಿಂದ ಹೋಳಿ ಹಬ್ಬವನ್ನು ಆಚರಿಸುವಂತಾಗುವ ಉದ್ದೇಶವು ಸಮಿತಿ ಹೊಂದಿದೆ. ಮಾ.೧೪ ರಂದು ಹೋಳಿ ಹಬ್ಬದ ಬಣ್ಣದಾಟ ನಡೆಯಲಿದೆ. ಮಾ.೧೯ ರಂದು ನಡೆಯಲಿರುವ ರಂಗಪಂಚಮಿ ಹಬ್ಬದಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಣ್ಣದ ಬಂಡಿಗಳು ಸಂಚರಿಸುವಂತೆ ಮಾಡುವ ಮೂಲಕ ಹೋಳಿಹಬ್ಬಕ್ಕೆ ಕಳೆ ತರುವ ಆಶಯ ಹೊಂದಲಾಗಿದೆ. ಹೋಳಿ ಹಬ್ಬದ ಆಚರಣೆಗೆ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು.
ಹಲಗೆ ಬಾರಿಸುವ ಸ್ಪರ್ಧೆ ತಂಡ, ವೈಯಕ್ತಿಕ ಎರಡು ವಿಭಾಗದಲ್ಲಿ ನಡೆಯಲಿದೆ. ತಂಡದಲ್ಲಿ ನಾಲ್ಕಕ್ಕಿಂತ ಹೆಚ್ಚು ಸದಸ್ಯರು ಭಾಗವಹಿಸಬೇಕು. ತಂಡದಲ್ಲಿ ಹಲಗೆ ಬಾರಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ.೧೫ ಸಾವಿರ, ದ್ವಿತೀಯ ಬಹುಮಾನ ರೂ. ೮ ಸಾವಿರ, ತೃತೀಯ ಬಹುಮಾನ ರೂ. ೫ ಸಾವಿರ, ವೈಯಕ್ತಿಕ ಹಲಗೆ ಬಾರಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ. ೧೧ ಸಾವಿರ, ದ್ವಿತೀಯ ಬಹುಮಾನ ರೂ. ೭,೫೦೦, ತೃತೀಯ ಬಹುಮಾನ ರೂ.೫ ಸಾವಿರ ನಗದು ಬಹಮಾನ ನೀಡುವ ಜೊತೆಗೆ ಪ್ರಶಸ್ತಿ ಪತ್ರ ನೀಡುವ ಮೂಲಕ ಗೌರವಿಸಲಾಗುವದು. ಸ್ಪರ್ಧೆಗೆ ಹೆಸರು ಉಚಿತವಾಗಿ ಮಾ. ೧೨ ರಂದು ಮಧ್ಯಾನ್ಹ ೨ ರೊಳಗೆ ನೋಂದಾಯಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಹಲಗೆಯನ್ನು ತಾವೇ ತರಬೇಕು. ಹಲಗೆ ಹೊರತು ಪಡಿಸಿ ಯಾವುದೇ ವಾದ್ಯಗಳಿಗೆ ಅವಕಾಶವಿರುವದಿಲ್ಲ. ನಿರ್ಣಾಯಕರ ನಿರ್ಣಯವೇ ಅಂತಿಮವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಬಸವರಾಜ ಹಾರಿವಾಳ ಮೊ-೯೦೦೮೦೫೭೮೦೮, ಡಾ.ಬಸವರಾಜ ಕೋಟಿ ಮೊ- ೮೬೬೦೨೬೯೮೭೫, ರವಿ ರಾಠೋಡ ಮೊ-೯೯೭೨೩೮೯೭೩೩ ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಶೇಖರ ಗೊಳಸಂಗಿ, ಸುರೇಶಗೌಡ ಪಾಟೀಲ, ಬಸವರಾಜ ಹಾರಿವಾಳ, ಚಂದ್ರಶೇಖರಗೌಡ ಪಾಟೀಲ, ರವಿ ರಾಠೋಡ, ಅನಿಲ ಅಗರವಾಲ, ಸಂಕನಗೌಡ ಪಾಟೀಲ, ಸಂಗಣ್ಣ ಕಲ್ಲೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.