Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಜಾ ಅವಧಿಯಲ್ಲೂ ಮಕ್ಕಳು ಅದ್ಯಯನಕ್ಕೆ ಆದ್ಯತೆ ನೀಡಲಿ
(ರಾಜ್ಯ ) ಜಿಲ್ಲೆ

ರಜಾ ಅವಧಿಯಲ್ಲೂ ಮಕ್ಕಳು ಅದ್ಯಯನಕ್ಕೆ ಆದ್ಯತೆ ನೀಡಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಂಕಲನಾತ್ಮಕ ಪರೀಕ್ಷೆ: ಬಿಇಒ ಭೇಟಿ ಪರಿಶೀಲನೆ | ಬಿಇಓ ಅಶೋಕ ಬಸಣ್ಣವರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಇದು ಸ್ಪಧಾ೯ತ್ಮಕ ಯುಗ. ಮಕ್ಕಳಿಗೆ ವಿದ್ಯಾಭ್ಯಾಸವೇ ಪ್ರಾಮುಖ್ಯವಾಗಬೇಕು. ಓದಾಭ್ಯಾಸಕ್ಕೆ ಸತತ ಆದ್ಯತೆ ನೀಡಲೇ ಬೇಕು. ಶಿಕ್ಷಣದಿಂದ ಮಾತ್ರ ಜೀವನ ಚೈತ್ರ ಅರಳುತ್ತದೆ. ಭವಿಷ್ಯತ್ತಿನ ಜೀವನ ಚಿತ್ರಣ ಬದಲಾಗುತ್ತದೆ. ಆ ಕಾರಣ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಉತ್ತಮ ಶಿಕ್ಷಣ ಪಡೆಯಲು ಗಟ್ಟಿತನದ ಮನಸ್ಸು ತೋರಬೇಕು ಎಂದು ಜಮಖಂಡಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಹೇಳಿದರು.
ಸೋಮವಾರ ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಪರಿಶೀಲಿಸಿದರು. ಮಧ್ಯಾಹ್ನದ ಅವಧಿಯಲ್ಲಿ ನಡೆದ ಪ್ರಸಕ್ತ 2024-25 ನೇ ಸಾಲಿನ 8 ಹಾಗೂ 9 ನೇ ತರಗತಿ ದ್ವೀತಿಯ ಸಂಕಲನಾತ್ಮಕ ಮೌಲ್ಯಾಂಕನ (ಎಸ್.ಎ.2) ಕನ್ನಡ ವಿಷಯದ ಪರೀಕ್ಷೆಯನ್ನು ಖುದ್ದಾಗಿ ಪರೀಕ್ಷಾ ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು. ಅಚ್ಚುಕಟ್ಟಾಗಿ ಪರೀಕ್ಷಾ ನಡೆಯುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಪರೀಕ್ಷೆಯನ್ನು ಉತ್ಸಾಹದಿಂದ ಬರೆಯುವ ಮನೋಭಾವ ಮಕ್ಕಳು ಹೊಂದಬೇಕು. ಆ ಆತ್ಮಸ್ಥೈರ್ಯ ಅಂಕುರಗೊಳ್ಳಲು ನಿರಂತರ ಅಭ್ಯಾಸದ ಹವ್ಯಾಸ ರೂಢಿಸಿಕೊಳ್ಳಬೇಕು.ಉತ್ತಮ ಸಂಸ್ಕಾರ, ಚಾರಿತ್ರ್ಯ ವಿದ್ಯಾರ್ಥಿಗಳ ಸಮೂಹಕ್ಕೆ ಅತ್ಯಗತ್ಯ. ಇಂಥ ಗುಣ ಸ್ವಭಾವವುಳ್ಳವರೇ ಸರ್ವೋಚ್ಚರು. ಅವರು ಸಮಾಜದಲ್ಲಿ ಉನ್ನತ ಮಟ್ಟದ ಸ್ಥಾನಮಾನ ಪಡೆಯಬಲ್ಲರು ಎಂದರು.
ಬೇಸಿಗೆ ರಜಾವಧಿಯಲ್ಲಿ ವಿದ್ಯಾರ್ಥಿಗಳು ಸುಖಾಸುಮ್ನೇ ಅತ್ತಇತ್ತ ಸುತ್ತಾಡಿ ಕಾಲ ಹರಣ ಮಾಡದೇ ನಿತ್ಯ ಅಭ್ಯಾಸದ ಕಡೆಗೆ ಗಮನ ಹರಿಸಬೇಕು.ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಬೇಕು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ತಮ್ಮ ಶೈಕ್ಷಣಿಕ ಏಳಿಗೆಗಾಗಿ ಸ್ವಯಂ ಪ್ರೇರಿತರಾಗಿ ಈಗಿಂದಲೇ ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಬಿಇಒ ಅವರ ಜೊತೆಯಲ್ಲಿ ಆಗಮಿಸಿದ ಜಮಖಂಡಿ ತಾಲೂಕು ಅಕ್ಷರ ದಾಸೇಹ ಅಧಿಕಾರಿ ಸಿ.ಎಸ್.ಕಲ್ಯಾಣಿ ಬಿಸಿಯೂಟ, ಆಡುಗೆ ಕೋಣೆ ಶುಚಿತ್ವ ತಪಾಸಣೆ ನಡೆಸಿದರು. ಇಲ್ಲಿನ ಪರೀಕ್ಷಾ,ಅಕ್ಷರ ದಾಸೋಹದ ವ್ಯವಸ್ಥೆಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಸಿ.ಆರ್.ಪಿ. ಆರ್.ಎಚ್.ಮುದ್ನೂರ, ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಜಾಲೋಜಿ, ಶಿಕ್ಷಕರಾದ ಗುಲಾಬಚಂದ ಜಾಧವ, ಈರಪ್ಪ ದೇಸಾಯಿ, ಲೋಹಿತ ಮಿಜಿ೯, ಶ್ರೀಶೈಲ ಹುಣಶಿಕಟ್ಟಿ, ವಿಶ್ರಾಂತ ಶಿಕ್ಷಕ ಬಸವರಾಜ ಅನಂತಪೂರ, ಶಿಕ್ಷಕಿಯರಾದ ಸಹನಾ ಹತ್ತಳ್ಳಿ (ಕಲ್ಯಾಣಿ), ಪ್ರಮೀಳಾ ತೇಲಸಂಗ, ಶೃತಿ ಲಿಗಾಡೆ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 08, 2026
    In ದಿನಪತ್ರಿಕೆ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.