ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಹೊಸನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಶಿವಶರಣ ಪೂಜಾರಿ ಇವರು ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳ ದೈಹಿಕ ಶಿಕ್ಷಕರುಗಳ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

