ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಠ ಸಾಧನೆಗಾಗಿ ಖ್ಯಾತ ನೇತ್ರತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ) ಅವರಿಗೆ ಜನನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಯಾದಗಿರಿ ನಗರದಲ್ಲಿ ಸೋಮವಾರ ಜರುಗಿದ ನಗೆಹಬ್ಬ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಯಿತು.
ಹತ್ತಿಗೂಡುರ ಮಾತ್ರೋಶ್ರೀ ಬಸಮ್ಮ ಶರಬಣ್ಣ ಮಹಾಮನಿ ಸೇವಾ ಟ್ರಸ್ಟ್ ವತಿಯಿಂದ ನೀಡುವ ಸೇವಾ ಶ್ರೇಷ್ಠ ಪ್ರಶಸ್ತಿಯನ್ನು ಸುಮಾರು ೩೦ ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಡಾ.ಪ್ರಭುಗೌಡ ಅವರ ಸೇವೆಯನ್ನು ಗುರುತಿಸಿ, ವಿಶೇಷವಾಗಿ ಅಂಧರ ಬಾಳಿಗೆ ಬೆಳಕಾಗಿ ಕಾರ್ಯ ನಿರ್ವಹಿಸಿ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಮನೆ ಮಾತಾಗಿರುವ ಇವರ ಅನನ್ಯ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಹಿರಿಯ ಚಿತ್ರನಟ ಮುಖ್ಯಮಂತ್ರಿ ಚಂದ್ರು, ಆನಂದ ಮಾಮನಿ, ದತ್ತಾತ್ರೇಯ ಹೊಸಮಠ, ಸಂಗಮೇಶ ಪಾಟೀಲ ಇದ್ದರು.

