ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಾದ್ಯಂತ ಆಚರಿಸಲಾಗುವ ಹೋಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಅಧಿನಿಯಮ ೧೯೬೫ರ ಕಲಂ ೨೧ರನ್ವಯ ಮಾ೧೩ ರ ಬೆಳಿಗ್ಗೆ ೬ ಗಂಟೆಯಿಂದ ಮಾ.೧೫ರ ಮಧ್ಯರಾತ್ರಿ ೧೨ ಗಂಟೆವರೆಗೆ ಹಾಗೂ ಮಾ.೧೯ರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ ೧೨ ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

