ಉದಯರಶ್ಮಿ ದಿನಪತ್ರಿಕೆ
ವಿಜಯಪುರ ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಿಲ್ಲೆಯಾದ್ಯಂತ ಮಾ.೧೩, ೧೪ ರಂದು ಕಾಮದಹನ ಹಾಗೂ ಮಾ.೧೫ರಂದು ಧೂಳವಾಡ (ಬಣ್ಣ) ಮತ್ತು ಮಾ.೧೯ ರಂದು ರಂಗಪಂಚಮಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೦೧ ರಿಂದ ೧೮ರವರೆಗೆ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಕೆ.ಎ.ಲೈನ್ ಅವರನ್ನು, ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೧೯ ರಿಂದ ೩೫ರವರೆಗೆ ಮಹಾನಗರ ಪಾಲಿಕೆಯ ಎಸ್ಟೇಟ್ ಆಪೀಸರ್ ಮಹಾವೀರ ಬೋರಣ್ಣವರ ಅವರನ್ನು ವಿಶೇಷ ದಂಡಾಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಉಪ ವಿಭಾಗೀಯ ದಂಡಾಧಿಕಾರಿಗಳು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

