ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಶಕ್ತಳಾಗಬೇಕು ಎಂದು ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ವಿಜಯಲಕ್ಷ್ಮಿ ಹಿರೇಮಠ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆ ಇಂದು ಸುಶಿಕ್ಷಿತಳಾಗಿ, ಸಮರ್ಥಳಾಗುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಪ್ರಾಚಾರ್ಯ ಅಶೋಕ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆರಂಭದಲ್ಲಿ ಉಪನ್ಯಾಸಕಿ ಪ್ರೇಮಕುಮಾರಿ ಸ್ವಾಗತಿಸಿದರು. ಚೈತ್ರಾ ಭಾಸಗಿ, ಸಾವಿತ್ರಿ ಮದಭಾವಿ ಪ್ರಾರ್ಥಿಸಿದರು. ಪುಷ್ಪಾ ಹುಣಶ್ಯಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಭಾಷಣ, ಮೆಹಂದಿ, ವೇಷಭೂಷಣ, ಬೆಂಕಿರಹಿತ ಅಡುಗೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನೀಯರಿಗೆ ಬಹುಮಾನ ವಿತರಿಸಲಾಯಿತು.
ಆಯ್‌ಕ್ಯೂಎಸಿ ಸಂಯೋಜಕ ಅಕ್ರಮ ಪಾಷಾ, ಸಾಂಸ್ಕೃತಿಕ ವಿಭಾಗದ ಸಂಯೋಜಕ ಪಿ.ಎಮ್. ಪರಗೊಂಡ, ಉಪನ್ಯಾಸಕರುಗಳಾದ ಎಸ್.ಬಿ.ಜಾಲವಾದಿ, ಎಮ್.ಎಮ್.ಲಕ್ಷ್ಮೀಶ, ಅವಿನಾಶ ಎಚ್, ವಿಜಯಲಕ್ಷ್ಮಿ ಪಾಟೀಲ ಸೇರಿದಂತೆ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಇದ್ದರು.

