ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ಕನ್ನಡ ಫಿಲಂ ಚೇಂಬರ್ ಸಂಸ್ಥೆ ವತಿಯಿಂದ ದಿ ಡಾ.ಪುನೀತ್ ರಾಜಕುಮಾರ್ ಜನ್ಮದಿನದ ಅಂಗವಾಗಿ ಮಾರ್ಚ್ 23 ಭಾನುವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಸಮಾರಂಭವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.
ಈ ಸಮಾರಂಭದಲ್ಲಿ ನಮ್ಮ ದಾವಣಗೆರೆಯ ಜಿಲ್ಲೆಯ ಯುವ ಪ್ರತಿಭೆ ಹಾಗೂ ಸಹ ನಿರ್ದೇಶಕ ವೀರೇಶ್ ಮಲ್ಲಾಬಾದಿ ರವರಿಗೆ ಯುವರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಎಂ ಎಸ್ ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.