Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ಯಾರಂಟಿ ಅನುಷ್ಠಾನ ಸಮಿತಿ ವಿರುದ್ಧ ವಿಪಕ್ಷಗಳ ಸಮರ
(ರಾಜ್ಯ ) ಜಿಲ್ಲೆ

ಗ್ಯಾರಂಟಿ ಅನುಷ್ಠಾನ ಸಮಿತಿ ವಿರುದ್ಧ ವಿಪಕ್ಷಗಳ ಸಮರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ಶಾಸಕರ ದೂರು | ಅನುಷ್ಠಾನ ಸಮಿತಿ ಅಸಂವಿಧಾನಿಕ | ರಾಜಕೀಯ ಆಧಾರದ ಮೇಲೆ ರಚನೆ | ರಾಜ್ಯದ ಬೊಕ್ಕಸಕ್ಕೆ ಅನಗತ್ಯ ಹೊರೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಮುಖ್ಯಸ್ಥರಾಗಿರುವ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿ ಅಸಂವಿಧಾನಿಕವಾಗಿದ್ದು, ಅವುಗಳನ್ನು ರದ್ದುಗೊಳಿಸಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಒಳಗೊಂಡಿರುವ ಈ ಸಮಿತಿಗಳನ್ನು ಸಂಪೂರ್ಣವಾಗಿ ರಾಜಕೀಯ ಆಧಾರದ ಮೇಲೆ ರಚನೆ “ಅಸಂವಿಧಾನಿಕ” ಮಾತ್ರವಲ್ಲದೇ, ರಾಜ್ಯದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗಿದೆ ಎಂದು ಹೇಳಿದರು.
ಈ ವಿಚಾರವಾಗಿ ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ, ಜೆಡಿಎಸ್ ಶಾಸಕರು ಎರಡನೇ ದಿನವೂ ವಿಧಾನಸೌಧದ ಕಲಾಪಕ್ಕೆ ಅಡ್ಡಿಪಡಿಸಿದರು. ನಂತರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ನಾಯಕ ಸಿ.ಬಿ.ಸುರೇಶ್ ಬಾಬು ಮತ್ತಿತರರ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಕೂಡಲೇ ವಿಸರ್ಜಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕ ಹಣದ ದುರ್ಬಳಕೆ ತಡೆಯಲು ರಾಜಕೀಯ ಪ್ರೇರಿತ ಸಮಿತಿಗಳನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ಅಲ್ಲದೆ, ಈ ಸಮಿತಿಗಳಿಗೆ ಮೀಸಲಿಟ್ಟ ಹಣವನ್ನು ಅಗತ್ಯ ಸಾರ್ವಜನಿಕ ಸೇವೆಗಳು ಮತ್ತು ಕಲ್ಯಾಣ ಯೋಜನೆಗಳಿಗೆ ವರ್ಗಾಯಿಸಲು ಮತ್ತು ಸ್ಥಳೀಯ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜನಪ್ರತಿನಿಧಿಗಳ ಪಾತ್ರವನ್ನು ಮರು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಮಿತಿಗಳನ್ನು ಕೇವಲ ರಾಜಕೀಯ ನೆಲೆಯಲ್ಲಿ ರಚಿಸಿರುವುದು ಅಸಾಂವಿಧಾನಿಕ ಮಾತ್ರವಲ್ಲದೆ ರಾಜ್ಯದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗುತ್ತಿದೆ. ಈ ಸಮಿತಿಗಳು ಸಾರ್ವಜನಿಕರ ಸೇವೆಗೆ ಬದಲಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಆರ್ಥಿಕವಾಗಿ ಲಾಭ ಮಾಡಿಕೊಡಲು ಬಳಕೆಯಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಸಮಿತಿ ಸದಸ್ಯರು ಹೆಚ್ಚಿನ ಗೌರವಧನವನ್ನು ಪಡೆಯುತ್ತಿದ್ದರೆ ಆಶಾ ಕಾರ್ಯಕರ್ತೆಯರು, ಮಧ್ಯಾಹ್ನದ ಊಟದ ಸಿಬ್ಬಂದಿ, ಅರೆಕಾಲಿಕ ಉಪನ್ಯಾಸಕರು ಮತ್ತು ಗುತ್ತಿಗೆ ನೌಕರರು ಕಡಿಮೆ ವೇತನಕ್ಕಾಗಿ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಕೀಯವಾಗಿ ರಚಿಸಿದ ಸಮಿತಿಗಳಿಗೆ ಉದಾರವಾಗಿ ಹಣ ನೀಡುವ ಸರ್ಕಾರ, ಅತ್ಯವಶ್ಯಕ ಸರ್ಕಾರಿ ಕೆಲಸಗಾರರ ಬೇಡಿಕೆಗಳನ್ನು ನಿರ್ಲಕ್ಷಿಸಿರುವುದು ತೀವ್ರ ಅನ್ಯಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

” ಗ್ಯಾರಂಟಿ ಅನುಷ್ಠಾನ ಸಮಿತಿಗಳು ಸಂವಿಧಾನ ಬಾಹಿರವಾಗಿದ್ದು, ಶಾಸಕರ ಅಧಿಕಾರ ಮೊಟಕುಗೊಳಿಸುವ ಯತ್ನವಾಗಿದೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಈ ಸಮಿತಿಗಳಿಂದ ಕೆಲವೆಡೆ ಸಚಿವರು, ಶಾಸಕರ ಸವಲತ್ತುಗಳನ್ನು ಮೊಟಕುಗೊಳಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ವಿಶೇಷ ಹಕ್ಕು ಮಂಡನೆಗೆ ಮುಂದಾಗುತ್ತೇವೆ.”

– ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷರು

“ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ಶಾಸಕರ ಹಕ್ಕುಗಳ ಹರಣವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಸಾಂವಿಧಾನಿಕವಾಗಿ ಶಾಸಕರ ಹಕ್ಕುಗಳನ್ನು ಕಡಿತ ಮಾಡುತ್ತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರ ನೇಮಕಾತಿ ಜನಪ್ರತಿನಿಧಿಗಳ ಅಧಿಕಾರವನ್ನು ದೋಷಪೂರಿತವಾಗಿ ನಿರ್ಬಂಧಿಸುವ ಕ್ರಮವಾಗಿದ್ದು, ಇದು ಪ್ರಜಾಪ್ರಭುತ್ವದ ತಾತ್ತ್ವಿಕ ಮೌಲ್ಯಗಳಿಗೆ ಧಕ್ಕೆ ತರುತ್ತಿದೆ.”

– ಡಾ ಸಿ.ಎಸ್.ಅಶ್ಷಥ್ ನಾರಾಯಣ
ಮಾಜಿ ಸಚಿವರು, ಹಾಲಿ ಶಾಸಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ

ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!

ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
  • ಸ್ಮಶಾನ ಭೂಮಿಗೆ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಿ :ಡಿಸಿ ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಅಲೆಮಾರಿ ಜನಾಂಗದವರ ಕಾಲೊನಿಗಳಿಗೆ ಮೂಲಸೌಲಭ್ಯ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಸಂಪೂರ್ಣ ಒಳಮೀಸಲಾತಿ ಜಾರಿಗೆ ರಕ್ತ ಕರಪತ್ರ ಚಳುವಳಿ!
    In (ರಾಜ್ಯ ) ಜಿಲ್ಲೆ
  • ಮಹಿಳೆ ಅಬಲೆಯಲ್ಲ ಸಬಲೆ :ಪ್ರತಿಮಾ ಪಾಟೀಲ
    In (ರಾಜ್ಯ ) ಜಿಲ್ಲೆ
  • ರೈತರ ಹೊಲದಲ್ಲಿ ಅನಾಹುತಕ್ಕೆ ಕಾದಿರುವ ವಾಲಿದ ವಿದ್ಯುತ್ ಕಂಬ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ :ಎಸಿ ಗುರುಸ್ವಾಮಿ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯದಿಂದಾಗಿ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.