ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶ್ರೀ ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ ಸಿದ್ಧಾಂತಗಳ ಮೂಲಕ ಸಮಾಜದ ಓರೆಕೋರೆಗಳನ್ನು ಹೋಗಲಾಡಿಸಲು ತಮ್ಮ ಮೂಲಕ ತತ್ವಸಿದ್ದಾಂತಗಳ ಮೂಲಕ ಸಂದೇಶ ಸಾರಿ ಇಡೀ ಸಮಾಜಕ್ಕೆ ಬೆಳಕಾದವರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.
ನಗರದ ಶ್ರೀ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರು ತಮ್ಮ ತತ್ವ, ಸಿದ್ದಾಂತಗಳಿಂದ ಈ ಜಗತ್ತಿಗೆ ಶಾಂತಿ ಹಾಗೂ ಸಹಬಾಳ್ವೆಯ ಸಂದೇಶ ಸಾರಿದ್ದಾರೆ ಎಂದರು.
ಮಹಾದೇವಯ್ಯ ಶಾಸ್ತ್ರೀಯವರು ಉಪನ್ಯಾಸ ನೀಡಿದರು.
ಶ್ರೀಮತಿ ಮಾಳವಿಕಾ ಜೋಶಿ ಸುಗಮ ಸಂಗೀತ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ವೈ.ಎ.ನಾರಾಯಣಕರ, ಜಿಲ್ಲಾ ಪಂಚಾಯತಿಯ ಯೋಜನಾ, ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಡಿವೈಎಸ್ಪಿ ಡಿ.ಎಸ್.ಧನಗರ ಸೇರಿದಂತೆ ಸಂಜೀವ ಹಿರೇಮಠ, ಎಸ್.ಎಸ್.ಹಿರೇಮಠ, ಗುರು ಗಚ್ಚೀನಮಠ, ಎನ್.ಆರ್.ಮಠ, ವಿಜಯಕುಮಾರ ಹಿರೇಮಠ ಹಿರೂರು, ಚಿದಾನಂದ ಹಿರೇಮಠ, ಶ್ರೀಮತಿ ಪುಷ್ಪಾ ಹಿರೇಮಠ ಸೇರಿದ್ದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಮೆರವಣಿಗೆಗೆ ಚಾಲನೆ
ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆಗೆ ಚುನಾವಣಾ ವಿಭಾಗದ ತಹಶೀಲ್ದಾರ ಪವಾರ ಹಾಗೂ ಜಿಲ್ಲಾ ಪಂಚಾಯತಿಯ ಯೋಜನಾ, ಅಂದಾಜು ಮತ್ತು ಮೌಲ್ಯ ಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾವತಿ ಅಂಕಲಗಿ, ದೇವೆಂದ್ರ ಮಿರೇಕರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರು, ಗಿರೀಶ ಕುಲಕರ್ಣಿ ಇದ್ದರು.