ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೩-೨೪ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕೋತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೦ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಅಥವಾhttps://bcwd.karnataka.gov.in ಗೆ ಭೇಟಿ ನೀಡಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
